Banglore News : ಖಾಸಗಿ ಸಾರಿಗೆ ಟೆನ್ಷನ್ ಮುಕ್ತಾಯದ ಬಳಿಕ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಮುಷ್ಕರಕ್ಕೆ ಮುಂದಾಗಿದ್ದಾರೆ.
ಶಿಕ್ಷಣ ಇಲಾಖೆಯ ಹೊಸ ನಿರ್ಧಾರಕ್ಕೆ ಅಂಗನವಾಡಿ ಸಿಬ್ಬಂದಿ ಸಿಡಿದೆದ್ದು, ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಪ್ರಾರಂಭಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 15ರಂದು ಶುಕ್ರವಾರ ಬೃಹತ್ ಪ್ರತಿಭಟನೆಗೆ ಅಂಗನವಾಡಿ ಕಾರ್ಯಕರ್ತೆಯರು ಸಜ್ಜಾಗಿದ್ದಾರೆ ಎನ್ನಲಾಗಿದೆ.
ಅಂಗನವಾಡಿ ಕೇಂದ್ರಗಳಿಗೆ ಪರ್ಯಾಯವಾಗಿ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲು ಇಲಾಖೆ ಮುಂದಾಗಿದೆ. 262 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭಕ್ಕೆ ತಯಾರಿ ನಡೆಸಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಹಾಗಾಗಿ ಶಿಕ್ಷಣ ಇಲಾಖೆಯ ಈ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ವಿರೋಧ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
Rain : ಸೆಪ್ಟೆಂಬರ್ 18ರವರೆಗೆ ರಾಜ್ಯದ ಬಹತೇಕ ಕಡೆ ಭಾರಿ ಮಳೆ ಮುನ್ಸೂಚನೆ..!