ಹೌದು ಮಾಲೂರು ತಾಲೂಕಿನ ಹುಳದೇನಹಳ್ಳಿ ಗ್ರಾಮಕ್ಕೆ, ಮಾಲೂರು ಶಾಸಕರು ಬೇಟಿ ನೀಡಿದ್ರು. ಹುಳದೇನಹಳ್ಳಿ ಗ್ರಾಮದಲ್ಲಿ ಬೃಹತ್ ವಿದ್ಯುತ್ ದೀಪಗಳನ್ನು ಹಾಕಲಾಗಿದೆ. ಆದ್ರೆ ಅದರಲ್ಲಿ ಯಾವುದು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಗ್ರಾಮದ ಸಾರ್ವಜನಿಕರು ಶಾಸಕರಿಗೆ ದೂರು ನೀಡಿದ್ರು. ಇದರಿಂದ ಬೇಸತ್ತ ಶಾಸಕರು ಪಿಡಿಓಗೆ, ಕೆಲವೇ ದಿನಗಳಲ್ಲಿ ವಿದ್ಯುತ್ ದೀಪಗಳನ್ನು ಸರಿಪಡಿಸುವಂತೆ ತಾಕಿತ್ತು ಮಾಡಿದ್ರು. ಇನ್ನು ಇದೇ ಸಂದರ್ಭದಲ್ಲಿ ಗ್ರಾಮದಲ್ಲಿ ಸರಿಯಾದ ಬಸ್ ನಿಲ್ದಾಣ ಇಲ್ಲದಿರುವುದನ್ನು ಕಂಡು ಹೈಟೆಕ್ ಬಸ್ ನಿಲ್ದಾಣ ಕಟ್ಟಿಸಿಕೊಡುವ ಬಗ್ಗೆ ಭರವಸೆ ನೀಡಿದ್ರು.

ಇನ್ನು ಬೃಹತ್ ವಿದ್ಯುತ್ ದೀಪಗಳಿಗೆ ಸಂಬಂದಿಸಿದಂತೆ ಹುಳದೇನಹಳ್ಳಿ ಗ್ರಾಮ ಪಂಚಾಯ್ತಿಯ ಪಿಡಿಓ ಆಗಿರುವ ಅರ್ಚನಾರವರು ಒಂದು ವಾರದಲ್ಲಿ ವಿದ್ಯುತ್ ದೀಪಗಳನ್ನು ಸರಿಪಡಿಸುವ ಬಗ್ಗೆ ವಿಶ್ವಾಸ ವ್ಯಕ್ತ ಪಡಿಸಿದ್ರು.
ಇತ್ತ ಕೇಸಿ ವ್ಯಾಲಿ ನೀರಿಗೆ ಸಂಬಂದಿಸಿದಂತೆ ಮಾತನಾಡಿದ ಮಾಲೂರು ಶಾಸಕರು ನಮ್ಮ ತಾಲೂಕಿಗೆ 67ಎಂಎಲ್ ಡಿ ನೀರು ಬರಬೇಕಿದೆ. ಆದರೆ ಕೇವಲ 13 ಎಂಎಲ್ ಡಿ ನೀರು ಬೀಡುತ್ತಿದ್ದಾರೆ. ಹೆಚ್ಚಿನ ನೀರು ಬೀಡುವಂತೆ ಅಧಿಕಾರಿಗಳಿಗೆ ಹಾಗೂ ಮಾನ್ಯ ಸಂಸದರಿಗೆ ಮನವಿ ಮಾಡುತ್ತಿದ್ದರು. ಇದಕ್ಕೆ ಸರಿಯಾದ ಸ್ಪಂದನೆ ಸಿಗುತ್ತಿಲ್ಲ. ನೀರು ಬೀಡದೇ ಹೋದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ರು.
ಒಟ್ಟಾರೆ ರಾಜಕೀಯವಾಗಿ ಹುಟ್ಟು ಬೇಳೆದ ಹುಳದೇನಹಳ್ಳಿ ಗ್ರಾಮಕ್ಕೆ ಶಾಸಕರು ಹಲವು ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ. ಈಗ ಹೈಟೆಕ್ ಬಸ್ ನಿಲ್ದಾಣವನ್ನು ಕಟ್ಟಿಸಿಕೊಡುವ ಭರವಸೆ ನೀಡಿರುವುದು ಗ್ರಾಮದ ಜನತೆಗೆ ಸಂತಸ ತಂದಿದೆ.
ನಾಗೇಶ್ ಹೆಚ್. ವಿ. ಕರ್ನಾಟಕ ನ್ಯೂಸ್ ಕೋಲಾರ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

