Koppala News: ರಾಘವೇಂದ್ರ ಹಿಟ್ನಾಳ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ

Koppala News: ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಕೊಪ್ಪಳದ ಅಶೋಕ್ ವೃತ್ತ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಅದಾಗಲೇ ಮೂರು ಬಾರಿ ಹ್ಯಾಟ್ರಿಕ್ ಗೆಲವು ಸಾಧಿಸಿರುವ ಕೊಪ್ಪಳ ಶಾಸಕರು ಹಿಟ್ನಾಳ್ ಅವರಿಗೆ ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಕೊಪ್ಪಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೈಕಮಾಂಡ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.

ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸಾಕಷ್ಟು ಅನುಭವ ಹೊಂದಿರುವ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಲೇಬೇಕೆಂದು ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯಿಸಿದ್ದಾರೆ.

About The Author