Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.

ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಶ್ರೇಷ್ಠ ಶಿಕ್ಷಣ ತಜ್ಞ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿನಲ್ಲಿ ಆಯೋಜಿಸಲಾದ ಈ ವಿಶೇಷ ಸಮಾರಂಭದಲ್ಲಿ ಗೌಡಪ್ಪ ಬಲಗುಂದಿ SDMC ತಾಲೂಕು ಅಧ್ಯಕ್ಷರು ಯಲಬುರ್ಗಾ, ಮತ್ತು ಶರಣಪ್ಪ SDMC ಅಧ್ಯಕ್ಷರು ಮುಖ್ಯೋಪಾಧ್ಯಾಯರು ಪ್ರಕಾಶ ಪಾಟೀಲ ಶಿಕ್ಷಕರು ಶಿವಕುಮಾರ ಹೊಂಬಳ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಶಿಕ್ಷಕರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ಮತ್ತು ಶಾಲಾ ಆಡಳಿತ ಮಂಡಳಿಯವರು ಶಿಕ್ಷಕರಿಗೆ ಶಾಲು ಹೊದಿಸಿ, ಮಾಲೆ ಹಾಕಿ ತಮ್ಮ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಜೀವನದಲ್ಲಿ ಶಿಕ್ಷಣದ ಮಹತ್ವ, ಗುರು-ಶಿಷ್ಯರ ನಡುವಿನ ಪವಿತ್ರ ಸಂಬಂಧ ಹಾಗೂ ಉತ್ತಮ ಮಾರ್ಗದಲ್ಲಿ ಸಾಗುವ ಕುರಿತು ಪ್ರೇರಣಾದಾಯಿಕ ಮಾತುಗಳನ್ನಾಡಿದರು.

ಶಾಲಾ ಆವರಣದಲ್ಲಿ ಮತ್ತು ತರಗತಿಯೊಳಗೆ ನಡೆದ ಈ ಸಮಾರಂಭವು ಪ್ರತಿಯೊಬ್ಬರ ಮನಸ್ಸಿನಲ್ಲಿ ಅಚ್ಚಳಿಯದ ನೆನಪಾಗಿ ಉಳಿಯುವಂತೆ ಯಶಸ್ವಿಯಾಗಿ ನೆರವೇರಿತು.

 

About The Author