Koppala: ರಾಜೀವ್ ಗಾಂಧಿ ಜ್ಯೋತಿ ಯಾತ್ರೆಗೆ ಅದ್ಧೂರಿ ಸ್ವಾಗತ: ಇಕ್ಬಾಲ್ ಅನ್ಸಾರಿ ಬೆಂಬಲಿಗರಿಂದ ಹೂಮಳೆ

Koppala News: ಗಂಗಾವತಿ: 35ನೇ ವರ್ಷದ ಅಖಿಲ ಭಾರತ ರಾಜೀವ್ ಗಾಂಧಿ ಜ್ಯೋತಿ ಯಾತ್ರೆ ಇಂದು ಗಂಗಾವತಿ ನಗರಕ್ಕೆ ಆಗಮಿಸಿದಾಗ ಮಾನ್ಯ ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ ಅವರ ಬೆಂಬಲಿಗರು ಮತ್ತು ಕಾರ್ಯಕರ್ತರಿಂದ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಯಾತ್ರೆ ನಗರಕ್ಕೆ ಆಗಮಿಸಿದಾಗ ಇಕ್ಬಾಲ್ ಅನ್ಸಾರಿ ಅವರ ಬೆಂಬಲಿಗರು ಹೂಮಳೆ ಸುರಿಸಿ, ಕಾಂಗ್ರೆಸ್ ಧ್ವಜಗಳನ್ನು ಹಿಡಿದು ಜೈಕಾರ ಕೂಗುವ ಮೂಲಕ ಯಾತ್ರೆಗೆ ಸ್ವಾಗತಿಸಿದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ಥಳೀಯ ಮುಖಂಡರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ರಾಜೀವ್ ಗಾಂಧಿ ಅವರ ತಂತ್ರಜ್ಞಾನ, ಯುವಶಕ್ತಿ ಮತ್ತು ಜಾತ್ಯಾತೀತ ವಿಚಾರಧಾರೆಯನ್ನು ಜನರಿಗೆ ತಲುಪಿಸುವುದು ಹಾಗೂ ಪಕ್ಷವನ್ನು ಸಂಘಟಿಸುವುದು ಈ ಯಾತ್ರೆಯ ಮುಖ್ಯ ಉದ್ದೇಶವಾಗಿದೆ.

KPCC ವತಿಯಿಂದ 08-08-2026 ರಂದು ಬಿಡುಗಡೆ ಮಾಡಲಾದ ಪತ್ರಿಕಾ ಪ್ರಕಟಣೆ ಪ್ರಕಾರ ಈ ಯಾತ್ರೆಯು ಆ.9 ರಂದು ಶ್ರೀನಗರದಿಂದ ಆರಂಭವಾಗಿ ಆ.19 ರಂದು ನವದೆಹಲಿಯಲ್ಲಿ ಸಮಾಪನಗೊಳ್ಳಲಿದೆ.

ಕೊಪ್ಪಳ ಜಿಲ್ಲೆಯ ಪ್ರಮುಖ ಕಾಂಗ್ರೆಸ್ ಮುಖಂಡರು ಹಾಗೂ ಇಕ್ಬಾಲ್ ಅನ್ಸಾರಿ ಅವರ ಅಭಿಮಾನಿಗಳು ಪಾಲ್ಗೊಂಡಿದ್ದರು.

About The Author