Banglore News : ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಆರ್.ಮೆಂಡನ್ ಅವರಿಗೂ ಸಹ ಮೇ 27ರಂದು ಖುದ್ದಾಗಿ ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿ ಮಾಡಿ ಆದೇಶ ಹೊರಡಿಸಿದೆ ಎನ್ನಲಾಗಿದೆ.
ಮಾರ್ಚ್ 30ರಂದು ಕಟಪಾಡಿ ಖಾಸಗಿ ಕಾಲೇಜು ಆವರಣದಲ್ಲಿ ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೇ ಪ್ರಚಾರ ಸಭೆ ಮಾಡಿದ್ದರು. ಈ ಹಿನ್ನೆಲೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ, ಮಾದರಿ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಿದ್ದರು. ಇನ್ನು ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಮೇ 27ರಂದು ಖುದ್ದಾಗಿ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ ಎನ್ನಲಾಗಿದೆ.
ವಿನಾಶ ಕಾಲೇ ವಿಪರೀತ ಬುದ್ಧಿ, ಇದು ಅವರ ಜೀವನದ ತಪ್ಪು ಹೆಜ್ಜೆ: ವಿಜಯೇಂದ್ರ ಹೀಗ್ಯಾಕಂದ್ರು ಗೊತ್ತಾ..?