- Advertisement -
ಮಂಗಳೂರು :ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ತಗುಲಿದೆ.ಇವರಿಗೆ ಎರಡನೇ ಬಾರಿ ಸೋಂಕು ತಗುಲಿದೆ.ಈ ಹಿಂದೆಯೂ ಅವರಿಗೆ ಕೋವಿಡ್ ಸೋಂಕು ತಗುಲಿತ್ತು.ಈ ಬಗ್ಗೆ ಅವರು ಟ್ವೀಟ್ ಮಾಡಿ ಮಾಹಿತಿ ತಿಳಿಸಿದ್ದಾರೆ.
‘ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಕಟೀಲ್ ಟ್ವೀಟ್ ಮಾಡಿದ್ದಾರೆ.
- Advertisement -