ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಆರೋಪ ಕೇಳಿಬರುತ್ತಿದ್ದು, ಮತದಾರರ ಪಟ್ಟಿಯನ್ನು ನವೀಕರಣಕ್ಕೆಂದು ನೀಡಿದ ಸಂದರ್ಭದಲ್ಲಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ಸಂಪೂರ್ಣ ಹೊಣೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಹೊರಬೇಕು ಮತ್ತು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸುತ್ತಿದ್ದಾರೆ.
RBI ಜೊತೆ ವ್ಯಾಪಕ ಮಾತುಕತೆ ನಂತರ ನೋಟುಗಳ ನಿಷೇಧ ಜಾರಿ : ಕೋರ್ಟ್ ಗೆ ತನ್ನ ನಿರ್ಧಾರ ಸಮರ್ಥಿಸಿಕೊಂಡ ಕೇಂದ್ರ
ಮುಖ್ಯಮಂತ್ರಿ ಬೊಮ್ಮಾಯಿ ರಾಜೀನಾಮೆ ನೀಡಬೇಕು. ಸಿಎಂ ಆದ್ಮೇಲೆ ಬೊಮ್ಮಾಯಿ ಏನೆಲ್ಲ ಆಟವಾಡುತ್ತಿದ್ದಾರೆ. ಮತದಾರರ ಪಟ್ಟಿಯನ್ನು ತಿರುಚಿದ್ದಾರೆ ಇದು ಅಪರಾಧ ಇಷ್ಟೆಲ್ಲ ಆದ್ಮೇಲೆ ಬೊಮ್ಮಾಯಿ ಸಿಎಂ ಆಗಿ ಹೇಗೇ ಮುಂದುವರೆಯಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಶ್ವತ್ಥ ನಾರಾಯಣ ವಿರುದ್ಧವೂ ಆರೋಪ ಮಾಡುತ್ತಿದ್ದಾರೆ. ಸಿಎಂ ಬೊಮ್ಮಾಯಿಯವರ ವಿರುದ್ಧ ನಾವು ದೂರು ಕೊಡುತ್ತೇವೆ ಅವರನ್ನು ಈ ಕೂಡಲೇ ಅರೆಸ್ಟ್ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಿಸಿದ್ದಾರೆ.