Friday, July 19, 2024

Latest Posts

‘ನನಗೆ ಯಾರ ನಂಬರ್ ಬಗ್ಗೆ ಮಾತನಾಡುವ ಶಕ್ತಿ ಇಲ್ಲ. ಪಕ್ಷದ 135 ಶಾಸಕರ ಸಂಖ್ಯೆ ನನ್ನ ಸಂಖ್ಯೆ’

- Advertisement -

ಬೆಂಗಳೂರು: ಇಂದು ನನ್ನ ಜನ್ಮದಿನವಾಗಿದ್ದು, ನನ್ನ ಖಾಸಗಿ ಕಾರ್ಯಕ್ರಮದಲ್ಲಿ ನನ್ನ ಗುರುಗಳನ್ನು ಭೇಟಿ ಮಾಡಲಿದ್ದೇನೆ. ನಂತರ ನಾನು ದೆಹಲಿಗೆ ಪ್ರಯಾಣ ಬೆಳೆಸಬೇಕಿದೆ.

ನಿನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷದ 135 ಶಾಸಕರೂ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದು, ಸಿಎಂ ಆಯ್ಕೆ ತೀರ್ಮಾನವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ತೀರ್ಮಾನಕ್ಕೆ ಬಿಡಲು ಎಲ್ಲಾ ಶಾಸಕರು ಸರ್ವಾನುಮತದ ಒಪ್ಪಿಗೆ ನೀಡಿದ್ದಾರೆ. ನನಗೆ ಯಾರ ನಂಬರ್ ಬಗ್ಗೆ ಮಾತನಾಡುವ ಶಕ್ತಿ ಇಲ್ಲ. ಡಬಲ್ ಇಂಜಿನ್ ಸರ್ಕಾರ ಹಾಗೂ ಭ್ರಷ್ಟಾಚಾರ ವಿರುದ್ಧ ನನ್ನ ಅಧ್ಯಕ್ಷತೆಯಲ್ಲಿ ಪಕ್ಷದ 135 ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಚುನಾವಣೆ ನಡೆಸಿದ ರೀತಿ, ಒಗ್ಗಟ್ಟಿನ ಪ್ರದರ್ಶನ ಎಲ್ಲವೂ ದೇಶಕ್ಕೆ ಮಾದರಿಯಾಗಿದ್ದು, ಅನೇಕ ನಾಯಕರುಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ..

ಕೆಲವು ಕಡೆಗಳಲ್ಲಿ ಸ್ಥಳೀಯವಾಗಿ ಉತ್ತಮವಾಗಿ ಸಂಘಟನೆ ಮಾಡಿದ್ದರೆ ನಮ್ಮ ಸಂಖ್ಯೆ ಇನ್ನು ಸ್ವಲ್ಪ ಹೆಚ್ಚಾಗುತ್ತಿತ್ತು. ಆದರೂ ನಮ್ಮ ಫಲಿತಾಂಶ ತೃಪ್ತಿ ತಂದಿದೆ. ಇಂದು ನಮ್ಮ ವರಿಷ್ಠರು ನನ್ನನ್ನು ಹಾಗೂ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆದಿದ್ದಾರೆ. ನಾನು ಹೋಗುತ್ತಿದ್ದೇನೆ. ನಾನು ಹೋಗುವುದು ಸ್ವಲ್ಪ ತಡವಾಗಲಿದೆ.

ನನ್ನ ವೈಯಕ್ತಿಕ ಬೆಂಬಲಕ್ಕೆ ಹೆಚ್ಚಿನ ಶಾಸಕರ ಸಂಖ್ಯಾಬಲವಿಲ್ಲದಿರಬಹುದು, ಆದರೆ ಪಕ್ಷದ 135 ಶಾಸಕರ ಸಂಖ್ಯೆ ನನ್ನ ಸಂಖ್ಯೆ. ನನ್ನನ್ನು ಪಕ್ಷದ ಅಧ್ಯಕ್ಷನಾಗಿ ಆಯ್ಕೆ ಮಾಡಿದಾಗ ನಾನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ಭರವಸೆ ನೀಡಿದ್ದೆ. ನಾನು ಕೊಟ್ಟ ಮಾತನ್ನು ಈಡೇರಿಸಿದ್ದೇನೆ.

ಬೇರೆಯವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ನಾನು ಬೇರೆಯವರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಓರ್ವ ವ್ಯಕ್ತಿ. ನಾನು ಧೈರ್ಯವಾಗಿ ಪಕ್ಷವನ್ನು ಮುನ್ನಡೆಸಿದ್ದು, ನನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದೇನೆ. ಕಳೆದ ಐದು ವರ್ಷಗಳಲ್ಲಿ ಏನೆಲ್ಲಾ ಆಗಿದೆ ಎಂದು ನಾನು ಬಹಿರಂಗಪಡಿಸುವುದಿಲ್ಲ. ಭವಿಷ್ಯದಲ್ಲಿ ಇದರ ಬಗ್ಗೆ ಮಾತನಾಡುತ್ತೇನೆ. ನಾವು ಮೈತ್ರಿ ಸರ್ಕಾರ ಕಳೆದುಕೊಂಡಾಗ ಶಾಸಕರು ಪಕ್ಷ ಬಿಟ್ಟು ಹೋದಾಗ ನಾವು ಧೃತಿಗೆಡಲಿಲ್ಲ. ಧೈರ್ಯವಾಗಿ ಜವಾಬ್ದಾರಿ ಹೊತ್ತು, ಕೆಲಸ ಮಾಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ನನಗೆ ಧೈರ್ಯ ತುಂಬಿದ್ದು, ಈ ವಿಚಾರವನ್ನು ಅವರಿಗೆ ಬಿಡುತ್ತೇನೆ’ ಎಂದು ತಿಳಿಸಿದರು.

ಡಿ.ಕೆ.ಶಿವಕುಮಾರ್ ಸಿಎಂ ಆಗಲು ತಮ್ಮ ಬೆಂಬಲ ವ್ಯಕ್ತಪಡಿಸಿದ ಹಲವು ಮಠದ ಸ್ವಾಮೀಜಿಗಳು

ರಾಜಕೀಯ ಮರೆತು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು: ಹೆಚ್.ಪಿ. ಸ್ವರೂಪ್

‘ನನ್ನ ಹುಟ್ಟುಹಬ್ಬಕ್ಕೆ ಕರ್ನಾಟಕ ಜನತೆ ಅತ್ಯುತ್ತಮ ಉಡುಗೊರೆ ನೀಡಿದ್ದಾರೆ’

- Advertisement -

Latest Posts

Don't Miss