Friday, May 17, 2024

Latest Posts

ಹಾಗಾದ್ರೆ ಚುನಾವಣೆಯಲ್ಲಿ ನಿಜವಾಗಿಯೂ ಗೋಲ್ ಮಾಲ್ ನಡೆದಿದ್ಯಾ…!?

- Advertisement -

ಬೆಂಗಳೂರು: ಎಕ್ಸಿಟ್ ಪೋಲ್ ರಿಪೋರ್ಟ್ ಬಂದಾಗಿನಿಂದ ಇವಿಎಂ  ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದ ಕಾಂಗ್ರೆಸ್  ನಾಯಕರು ಫಲಿತಾಂಶ ಬಂದ ಮೇಲೆ ಸುಮ್ಮನಾಗಿದ್ರು. ಆದ್ರೆ ಇದೀಗ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶದ ಬಳಿಕ ಮತ್ತೆ ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿರೋ ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಇವಿಎಂ, ವಿವಿ ಪ್ಯಾಟ್ ಹೊಂದಾಣಿಕೆಯಲ್ಲಿ ವ್ಯತ್ಯಾಸವಿದೆ. ಎರಡೂ ಯಂತ್ರಗಳಲ್ಲಿನ ಮತಗಳ ಸಂಖ್ಯೆ ತಾಳೆಯಾಗುತ್ತಿಲ್ಲ. ಆದ್ರೆ ಈ ಬಗ್ಗೆ ಚುನಾವಣಾ ಆಯೋಗ ಮಾತನಾಡುತ್ತಿಲ್ಲ. ಆಯೋಗದ ಬಳಿಯೇ ಉತ್ತರವಿಲ್ಲ. ಚುನಾವಣೆಗಳು ಪಾರದರ್ಶಕವಾಗಿ ನಡೆಯಬೇಕು. ಇವಿಎಂ-ವಿವಿ ಪ್ಯಾಟ್ ಹೊಂದಾಣಿಕೆಯಾಗದಿರೋ ಬಗ್ಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು ಅಂತ ಟ್ವೀಟ್ ಮಾಡೋ ಮೂಲಕ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

ಅಲ್ಲದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆದ್ದಿದೆ. ಈ ಚುನಾವಣೆ ಲೋಕಸಭಾ ಚುನಾವಣೆ ನಡೆದ ಕೆಲ ದಿನಗಳಲ್ಲೇ ನಡೆದಿದೆ. ಹೀಗಿದ್ದರೂ ಜನ ಬಿಜೆಪಿ ಕೈ ಯಾಕೆ ಹಿಡಿದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರೋ ಬಿಜೆಪಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನೆಲ ಕಚ್ಚಿದೆ. ಈ ಬಗ್ಗೆ ತನಿಖೆ ನಡೆಯಬೇಕು ಅಂತ ಸಂಶಯ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿಗೆ ದೇಶ ಮುಖ್ಯವೋ, ಪಕ್ಷ ಮುಖ್ಯವೋ…??ಮಿಸ್ ಮಾಡದೇ ಈ ವಿಡಿಯೋ ನೋಡಿ

- Advertisement -

Latest Posts

Don't Miss