ಬೆಂಗಳೂರು: ಬಹುಮತವಿಲ್ಲದಿದ್ರೂ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ನೀಡಿದೆ ಅಂತ ಅಸಮಾಧಾನ ವ್ಯಕ್ತಪಡಿಸಿರೋ ದೋಸ್ತಿ ಇದೀಗ ಯಡಿಯೂರಪ್ಪ ಪ್ರಮಾಣವಚನ ಸಮಾರಂಭ ಒಂದು ಅಪವಿತ್ರ ಕಾರ್ಯಕ್ರಮ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.
ಕುದುರೆ ವ್ಯಾಪಾರ ಮತ್ತು ಭ್ರಷ್ಟ ಮಾರ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಅಸಂವಿಧಾನಿಕ ಮತ್ತು ಅನೈತಿಕವಾಗಿದ್ದು, ಇದು ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆ. ಈ ಅಪವಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸುತ್ತೇನೆ, ಪಕ್ಷದ ಎಲ್ಲಾ ನಾಯಕರುಗಳಿಗೆ ಭಾಗವಹಿಸದಂತೆ ಸೂಚನೆ ನೀಡುತ್ತೇನೆ ಅಂತ ಟ್ವೀಟ್ ಮಾಡಿರೋ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಇಂದು ಬೆಳಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಯಡಿಯೂರಪ್ಪ, ನಿರ್ಗಮಿತ ಸಿಎಂ ಕುಮಾರಸ್ವಾಮಿ ಮತ್ತು ಸಿಎಲ್ ಪಿ ನಾಯಕ ಸಿದ್ದರಾಮಯ್ಯ ದಯವಿಟ್ಟು ನನ್ನ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭಕ್ಕೆ ಬರಬೇಕು ಅಂತ ಮಾಧ್ಯಮದ ಮೂಲಕ ತಿಳಿದ್ರು. ಅಲ್ಲದೆ ದೂರವಾಣಿ ಮತ್ತು ಪತ್ರದ ಮೂಲಕವೂ ಸಮಾರಂಭಕ್ಕೆ ಬರುವಂತೆ ತಿಳಿಸಿದ್ದ ಬಿಎಸ್ವೈ ಆಹ್ವಾನಕ್ಕೆ ನಿರ್ಗಮಿತ ಸಿಎಂ ಕುಮಾರಸ್ವಾಮಿ ಹಾಜರಾಗದಿರಲು ನಿರ್ಧರಿಸಿದ್ದು, ಇದೀಗ ಕಾಂಗ್ರೆಸ್ ನಾಯಕರೂ ಕೂಡ ಗೈರಾಗುವುದು ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಸ್ಪಷ್ಟವಾಗಿದೆ.