Sunday, March 3, 2024

Latest Posts

ಸುಪ್ರೀಂಕೋರ್ಟ್ ತೀರ್ಪಿಗೆ ದಿನೇಶ್ ಗುಂಡೂರಾವ್ ಅಸಮಾಧಾನ

- Advertisement -

ಬೆಂಗಳೂರು: ಅತೃಪ್ತ ಶಾಸಕರ ಅರ್ಜಿ ಕುರಿತು ಇಂದು ಸುಪ್ರೀಂಕೋರ್ಟ್ ನೀಡಿರುವ ಮಧ್ಯಂತರ ತೀರ್ಪಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪಿನ ಕುರಿತು ಟ್ವೀಟ್ ಮಾಡಿರುವ ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಅತೃಪ್ತ ಶಾಸಕರು ವಿಪ್ ಉಲ್ಲಂಘನೆ ಮಾಡಲು ಸಹಕಾರಿಯಾಗಲೆಂದೇ ಸುಪ್ರೀಂ ಕೋರ್ಟ್ ಆದೇಶ ನೀಡಿದಂತಿದೆ ಅಂತ ಅಸಮಾಧಾನ ಹೊರಹಾಕಿದ್ದಾರೆ.

ಬಳಿಕ ಮತ್ತೊಂದು ಟ್ವೀಟ್ ಮಾಡಿರೋ ದಿನೇಶ್ ಗುಂಡೂರಾವ್, ಸುಪ್ರೀಂ ಕೋರ್ಟ್ ನೀಡಿರೋ ತೀರ್ಪು ಶಾಸಕಾಂಗದ ಹಕ್ಕುಗಳನ್ನು ಅತಿಕ್ರಮಿಸುತ್ತಿದೆ. ದೋಷಪೂರಿತರ ರಕ್ಷಣೆ ಹಾಗೂ ಕುದುರೆ ವ್ಯಾಪಾರವನ್ನು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸುಪ್ರೀಂ ತೀರ್ಪು ನೀಡಿದಂತೆ ಭಾಸವಾಗ್ತಿದೆ ಅಂತಲೂ ದಿನೇಶ್ ಗುಂಡೂರಾವ್ ಕಿಡಿ ಕಾರಿದ್ದಾರೆ.

ಕಡೇ ಆಟಕ್ಕೆ ರೆಡಿಯಾದ ದೋಸ್ತಿ..!ಮಿಸ್ ಮಾಡದೇ ಈ ವಿಡಿಯೋ ನೋಡಿ

https://www.youtube.com/watch?v=b8t70v5-68U
- Advertisement -

Latest Posts

Don't Miss