BREAKING NEWS: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮತ್ತ ಸಂಕಷ್ಟ: ಇಡಿ ಅಧಿಕಾರಿಗಳಿಂದ ಕೋರ್ಟ್ ಗೆ ಹೊಸ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಮತ್ತೆ ಇಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. 2019ರ ಪ್ರಕರಣ ಸಂಬಂಧ, ಎರಡೂವರೆ ವರ್ಷದ ಬಳಿಕ ಅವರ ವಿರುದ್ಧ ದೆಹಲಿಯ ವಿಶೇಷ ಕೋರ್ಟ್ ಗೆ ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಗೆ ಈಗ ಮತ್ತೆ ಇಡಿ ಸಂಕಷ್ಟ ಶುರುವಾಗಿದೆ.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಎಂದೇ ಹೇಳಲಾಗುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಈಗ ಇಡಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಈ ಹಿಂದೆ 2019ರಲ್ಲಿ ಇಡಿ ಅಧಿಕಾರಿಗಳಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದಂತ ಪ್ರಕರಣದಲ್ಲಿ, ಜಾಮೀನು ಪಡೆದು, ಹೊರಗಿರುವಂತ ಅವರ ವಿರುದ್ಧ, ಈಗ ಹೊಸದಾಗಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎನ್ನಲಾಗಿದೆ.

ದೆಹಲಿಯಲ್ಲಿರುವಂತ ಇಡಿ ವಿಶೇಷ ಕೋರ್ಟ್ ಗೆ ಡಿಕೆ ಶಿವಕುಮಾರ್ ವಿರುದ್ಧ ಹೊಸ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎನ್ನಲಾಗಿದೆ. ಕೋರ್ಟ್ ನಿರ್ದೇಶನದಂತೆ ಕೆಲ ಮಾರ್ಪಾಡುಗಳನ್ನು ಮಾಡಿ, ಈಗ ಹೊಸ ಚಾರ್ಜ್ ಶೀಟ್ ಸಲ್ಲಿಸಿದೆ ಎನ್ನಲಾಗಿದೆ. ಹೀಗಾಗಿ ಎರಡೂವರೆ ವರ್ಷದ ಬಳಿಕ ಮತ್ತೆ ಸಂಕಷ್ಟ ಶುರುವಾಗಿದೆ.

About The Author