Thursday, July 25, 2024

Latest Posts

ಹಸಿದವರಿಗೆ ಅನ್ನ ಯೋಜನೆ – ಡಿಕೆ ಶಿವಕುಮಾರ್ ಪರಿಶೀಲನೆ

- Advertisement -

ಬೆಂಗಳೂರು : ಕೊರೊನಾ ಹಾವಳಿಯಿಂದ ಇಡೀ ದೇಶ ಲಾಕ್ ಡೌನ್ ಆಗಿದೆ.. ಬಡವರು, ಕೂಲಿ ಕಾರ್ಮಿಕರು ಊಟಕ್ಕಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಸಿದವರಿಗೆ ಅನ್ನಹಾಕುವ ಕೆಲಸ ಮಾಡ್ತಿದ್ದಾರೆ. ಕಾಂಗ್ರೆಸ್ ಶಾಸಕ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸಹ ನಿತ್ಯ ಸಾವಿರಾರು ಜನರಿಗೆ ಊಟ ಕೊಡುವ ವ್ಯವಸ್ಥೆ ಮಾಡಿದ್ದಾರೆ..

ಬೆಂಗಳೂರಿನ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಕಸಂಧ್ರದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿನ ಆಹಾರ ತಯಾರಿಕಾ ಕೇಂದ್ರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗುರುವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಸ್ಥಳೀಯ ಶಾಸಕ ರಾಮಲಿಂಗಾ ರೆಡ್ಡಿ ಅವರು ಜತೆಗಿದ್ದರು. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ ಅವರು ಆಹಾರ ಸವಿದು ಗುಣಮಟ್ಟ ಪರೀಕ್ಷಿಸಿದರು.

ಕರ್ನಾಟಕ ಟಿವಿ, ಬೆಂಗಳೂರು

https://www.youtube.com/watch?v=G3vCfoGGj_g
- Advertisement -

Latest Posts

Don't Miss