KR Marketನಲ್ಲಿ ಪುಟ್ಟಬಾತ್ ವ್ಯಾಪಾರಿಗಳ ಸಂಕಷ್ಟ- ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ’ ಎಂದು ಮನವಿ

ಬೆಂಗಳೂರು: ನಗರದ ಪ್ರಮುಖ ಮಾರುಕಟ್ಟೆ ಪ್ರದೇಶವಾದ ಕೆ.ಆರ್. ಮಾರ್ಕೆಟ್‌ನಲ್ಲಿ ಪುಟ್ಟಬಾತ್ ವ್ಯಾಪಾರಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವ್ಯಾಪಾರಕ್ಕೆ ಸೂಕ್ತ ಅವಕಾಶ ಸಿಗದೆ ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.

ಇಂದು ಕೆ.ಆರ್. ಮಾರ್ಕೆಟ್‌ನಲ್ಲಿ ಪುಟ್ಟಬಾತ್ ವ್ಯಾಪಾರಿಗಳನ್ನು ಭೇಟಿಯಾಗಿ ಅವರ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲಾಯಿತು. ಈ ವೇಳೆ ಮಾತನಾಡಿದ ವ್ಯಾಪಾರಿಗಳು, ಹಲವು ವರ್ಷಗಳಿಂದ ಪುಟ್ಟಬಾತ್ ವ್ಯಾಪಾರವನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದೇವೆ. ಆದರೆ ವ್ಯಾಪಾರ ಮಾಡಲು ಸೂಕ್ತ ವ್ಯವಸ್ಥೆ ಮತ್ತು ಅವಕಾಶ ಇಲ್ಲದಿರುವುದರಿಂದ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ ಎಂದು ತಮ್ಮ ಅಳಲು ತೋಡಿಕೊಂಡರು.

ಪ್ರತಿದಿನ ವ್ಯಾಪಾರ ಮಾಡಿದರೆ ಮಾತ್ರ ಕುಟುಂಬದ ಖರ್ಚು, ಮಕ್ಕಳ ಶಿಕ್ಷಣ ಸೇರಿದಂತೆ ಅಗತ್ಯ ಜೀವನ ವೆಚ್ಚಗಳನ್ನು ನಿಭಾಯಿಸಲು ಸಾಧ್ಯವಾಗುತ್ತದೆ. ಆದರೆ ವ್ಯಾಪಾರಕ್ಕೆ ತೊಂದರೆ ಉಂಟಾದರೆ ನಮ್ಮ ಬದುಕಿನ ಮೇಲೆಯೇ ನೇರ ಪರಿಣಾಮ ಬೀರುತ್ತದೆ ಎಂದು ವ್ಯಾಪಾರಿಗಳು ಹೇಳಿದ್ದಾರೆ.

ಸಣ್ಣ ವ್ಯಾಪಾರವನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ನಮ್ಮಂತಹವರಿಗೆ ಸೂಕ್ತ ಸ್ಥಳ ಹಾಗೂ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಬೇಕು. ಅಧಿಕಾರಿಗಳು ನಮ್ಮ ಸಮಸ್ಯೆಗಳನ್ನು ಗಮನಿಸಿ, ನಮಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂದು ವ್ಯಾಪಾರಿಗಳು ಮನವಿ ಮಾಡಿದ್ದಾರೆ.

ಅಲ್ಲದೆ, ವ್ಯಾಪಾರಿಗಳ ಸಮಸ್ಯೆಗಳನ್ನು ಕೇವಲ ತೆರವು ಕಾರ್ಯಾಚರಣೆಯ ದೃಷ್ಟಿಯಿಂದ ನೋಡದೆ, ಅವರ ಜೀವನೋಪಾಯದ ಬಗ್ಗೆಯೂ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು. ಸಣ್ಣ ವ್ಯಾಪಾರಿಗಳ ಬದುಕಿಗೆ ತೊಂದರೆಯಾಗದಂತೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂಬುದು ವ್ಯಾಪಾರಿಗಳ ಒತ್ತಾಯವಾಗಿದೆ.

ಪುಟ್ಟಬಾತ್ ವ್ಯಾಪಾರಿಗಳ ಸಮಸ್ಯೆ ಕುರಿತು ಅಧಿಕಾರಿಗಳು ಗಮನಹರಿಸಿ, ವ್ಯಾಪಾರ ಮಾಡಲು ಅಗತ್ಯ ಅವಕಾಶ ಮತ್ತು ಸೂಕ್ತ ವ್ಯವಸ್ಥೆ ಕಲ್ಪಿಸುತ್ತಾರೆಯೇ ಎಂಬುದನ್ನು ಕಾದುನೋಡಬೇಕಿದೆ.

About The Author