Chikkodi News : ಸಹ್ಯಾದ್ರಿ ಘಟ್ಟಪ್ರದೇಶದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಹಾಗೂ ಚಿಕ್ಕೋಡಿ ತಾಲೂಕಿನ ನದಿ ತೀರದಲ್ಲಿ ಸುರಿಯುತ್ತಿರುವ ಮಳೆಯಿಂದ ಕಲ್ಲೋಳ ಬಳಿ ಕೃಷ್ಣಾ ನದಿಗೆ 1,14,252 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಸಂಭವನೀಯ ಪ್ರವಾಹ ಎದುರಿಸಲು ಉಪವಿಭಾಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿವೆ ಎಂದು ಹೇಳಲಾಗಿದೆ.
ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ದಿಂದ ಕೃಷ್ಣಾ ನದಿಗೆ ಬಹಳಷ್ಟು ಕ್ಯುಸೆಕ್‌ನಷ್ಟು ನೀರು ಹರಿದು ಬರುತ್ತಿದೆ. ಕೃಷ್ಣಾ, ದೂಧಗಂಗಾ ಸೇರಿದಂತೆ ಉಪನದಿಗಳಿಗೆ ನಿರಂತರ ನೀರು ಹರಿದು ಬರುತ್ತಿದ್ದು, ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಆಗುತ್ತಿರುವುದರಿಂದ ವೇದಗಂಗಾ, ದೂಧಗಂಗಾ ಮತ್ತು ಕೃಷ್ಣಾ ನದಿಯ ಕೆಳಹಂತದ ಎಲ್ಲ ಬ್ಯಾರೇಜ್‌ಗಳು ಮುಳುಗಡೆಯಾಗಿವೆ ಎನ್ನಲಾಗಿದೆ.
ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ನಿರಂತರವಾಗಿ ನದಿ ತೀರದ ಬ್ಯಾರೇಜ್‌ಗಳ ಹತ್ತಿರ ತಾಲೂಕು ಆಡಳಿತಕ್ಕೆ ಮಾಹಿತಿ ನೀಡುವ ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ನದಿ ನೀರಿನ ಮಟ್ಟ ಏರುತ್ತಿರುವುದರಿಂದ ಸಾರ್ವಜನಿಕರ ನದಿ ತೀರಕ್ಕೆ ಹೋಗಬಾರದು ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ಜನರಲ್ಲಿ ಮನವಿ ಮಾಡಿದ್ದಾರೆ.
Siddaramaiah : ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂಧಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ