ಮಹಾಮಳೆಗೆ ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ: ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ

Bagalakote News: ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ.

ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ 1 ಲಕ್ಷ 60 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹಿಪ್ಪರಗಿ ಜಲಾಶಯದಿಂದ 1 ಲಕ್ಷ 60 ಸಾವಿರ ಕ್ಯೂಸೆಕ್ ನೀರು ಹೊರ ಹರಿವಾಗಿದ್ದು, ಜಮಖಂಡಿ ತಾಲ್ಲೂಕಿನ ಮುತ್ತೂರ, ಮೈಗೂರ, ಕಂಕನವಾಡಿ ನಡುಗಡ್ಡೆ ಜಲಾವೃತವಾಗಿದೆ.

ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದು, ಮಹಾಮಳೆ ನಿಲ್ಲದ ಕಾರಣ, ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

About The Author