Yadagiri News : ಕೃಷ್ಣಾ ಎಡ ಹಾಗೂ ಬಲ ದಂಡೆಯ ಕಾಲುವೆಗಳ ಮೂಲಕ ನೀರು ಬಿಡುಗಡೆ ಮಾಡುತ್ತಿರುವುದರಿಂದ ನದಿ ತೀರದ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ಇದರಿಂದಾಗಿ ಯಾದಗಿರಿ ಹಾಗೂ ರಾಯಚೂರು ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸಿದೆ.
ಜೊತೆಗೆ ನದಿ ತೀರದ ಗ್ರಾಮಗಳಿಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಆಡಳಿತಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಅಲ್ಲದೇ ಮೈಕ್ ಮೂಲಕ ಜಾನುವಾರುಗಳನ್ನು ನದಿ ಸಮೀಪಕ್ಕೆ ಬಿಡದಂತೆ, ಜನರು ನದಿಗೆ ಇಳಿಯದಂತೆ, ನದಿ ತೀರದಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ಮುನ್ನೆಚ್ಚರಿಕೆ ನೀಡಿದ್ದಾರೆ.
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆಗೂ ಮುನ್ನ ಅಧಿಕಾರಿಗಳು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದರು. ವಿಜಯಪುರ ಜಿಲ್ಲೆಯ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಿಂದ ಬಸವಸಾಗರಕ್ಕೆ 1 ಲಕ್ಷದ 50 ಸಾವಿರ ಕ್ಯೂಸೆಕ್ ನಷ್ಟು ನೀರು ಹರಿದು ಬರುತ್ತಿದೆ.