ತಮಿಳುನಾಡಿಗೆ ರಾತ್ರೋರಾತ್ರಿ ನೀರು? ಸಚಿವರಿಂದ ಬಂತು ನೇರ ಉತ್ತರ!

ಮಂಡ್ಯದ KRS ಅಣೆಕಟ್ಟೆಯಿಂದ ತಮಿಳುನಾಡಿಗೆ ರಾತ್ರೋರಾತ್ರಿ ರಹಸ್ಯವಾಗಿ ನೀರು ಹರಿಸಲಾಗುತ್ತಿದೆ ಎಂಬ ಗಂಭೀರ ಆರೋಪಗಳಿಗೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಸಿ. ಚಲುವರಾಯಸ್ವಾಮಿ ಅವರು ಈಗ ನೇರ ಉತ್ತರ ನೀಡಿದ್ದಾರೆ!

ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ರಾಜ್ಯದ ರೈತರ ಹಿತವನ್ನು ಬಲಿಕೊಟ್ಟು ನೆರೆ ರಾಜ್ಯಕ್ಕೆ ನೀರು ಹರಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿರೋಧ ಪಕ್ಷಗಳು ಮತ್ತು ಕೆಲವು ಸಂಘಟನೆಗಳು ಮಾಡುತ್ತಿರುವ ಈ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಅಂತ ಅವರು ತಳ್ಳಿಹಾಕಿದರು.

ನೀರು ಎಲ್ಲಿಗೆ ಬಳಕೆಯಾಗ್ತಿದೆ? ಕಾವೇರಿ ಜಲಾನಯನ ಪ್ರದೇಶದ ನಾಲೆಗಳಿಗೆ ಹಾಗೂ ಕುಡಿಯುವ ನೀರಿನ ಅಗತ್ಯಕ್ಕಾಗಿ ಮಾತ್ರ ಈಗ ನೀರನ್ನು ಎಚ್ಚರಿಕೆಯಿಂದ ನಿರ್ವಹಣೆ ಮಾಡಲಾಗುತ್ತಿದೆ. ಜಲಾಶಯಗಳಲ್ಲಿ ಲಭ್ಯವಿರುವ ನೀರಿನ ಪ್ರಮಾಣ ಮತ್ತು ಕುಡಿಯುವ ನೀರಿನ ಅಗತ್ಯತೆಯ ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಈಗಾಗಲೇ ಸಂಪೂರ್ಣ ಮಾಹಿತಿ ನೀಡಲಾಗಿದೆ ಅಂತ ತಿಳಿಸಿದ್ದಾರೆ.

ಅಲ್ಲದೆ, ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕಾನೂನು ಹೋರಾಟ ಮುಂದುವರಿಸಲು ನಮ್ಮ ಸರ್ಕಾರ ಸಂಪೂರ್ಣ ಬದ್ಧವಾಗಿದೆ. ಅಗತ್ಯ ಬಿದ್ದರೆ ರಾಜ್ಯದ ಜನರ ಹಿತರಕ್ಷಣೆಗಾಗಿ ಸುಪ್ರೀಂ ಕೋರ್ಟ್‌ನಲ್ಲಿಯೂ ಕಾನೂನಾತ್ಮಕ ಹೋರಾಟವನ್ನು ಗಟ್ಟಿಯಾಗಿ ನಡೆಸಲಾಗುವುದು ಎಂದು ಸಚಿವರು ಭರವಸೆ ನೀಡಿರೋದಾಗಿ ತಿಳಿದುಬಂದಿದೆ.

ಒಟ್ಟಿನಲ್ಲಿ ಹೇಳಬೇಕು ಅಂದ್ರೆ ‘ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಸಿಕ್ಕಿದ್ದರೂ, ವಿರೋಧ ಪಕ್ಷಗಳು ಮತ್ತು ರೈತ ಸಂಘಟನೆಗಳ ಮುಂದಿನ ಹೆಜ್ಜೆ ಹೇಗಿರುತ್ತೆ ಅನ್ನೋದನ್ನ ಕಾದು ನೋಡಬೇಕು. ಈ ಕಾವೇರಿ ವಿವಾದದ ಬಗ್ಗೆ ನಿಮ್ಮ ಅಭಿಪ್ರಾಯವೇನು? ಕಮೆಂಟ್ ಮಾಡಿ..

About The Author