ಬೆಂಗಳೂರಿಗೆ ಕೆ.ಎಸ್ ಈಶ್ವರಪ್ಪ ಆಗಮನ: ಕೆಲವೇ ಕ್ಷಣಗಳಲ್ಲಿ ಸಿಎಂಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಕೆ

ಬೆಂಗಳೂರು: ಶಿವಮೊಗ್ಗದಿಂದ ಇಂದು ಹೊರಟಂತ ಸಚಿವ ಕೆ ಎಸ್ ಈಶ್ವರಪ್ಪ ಇದೀಗ, ಬೆಂಗಳೂರು ತಲುಪಿದ್ದಾರೆ. ನೇರವಾಗಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಲಿರುವಂತ ಅವರು, ಕೆಲವೇ ಗಂಟೆಗಳಲ್ಲಿ ತಮ್ಮ ರಾಜೀನಾಮೆಯನ್ನು ಸಲ್ಲಿಸಲಿದ್ದಾರೆ.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸೋದಾಗಿ ಸಚಿವ ಕೆ ಎಸ್ ಈಶ್ವರಪ್ಪ ನಿನ್ನೆ ಘೋಷಣೆ ಮಾಡಿದ್ದರು. ಅಲ್ಲದೇ ಇಂದು ಸಿಎಂ ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸೋದಾಗಿಯೂ ತಿಳಿಸಿದ್ದರು.

ಈ ಹಿನ್ನಲೆಯಲ್ಲಿ ಶಿವಮೊಗ್ಗದಿಂದ ಹೊರಟು ಬೆಂಗಳೂರು ತಲುಪಿಸಿರುವಂತ ಅವರು, ನೇರವಾಗಿ ರೇಸ್ ಕೋರ್ಸ್ ರಸ್ತೆಯಲ್ಲಿರುವಂತ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಕೆಲ ಕಾಲ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚಿಸಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ.

About The Author