BREAKING NEWS: ಸಚಿವಸ್ಥಾನಕ್ಕೆ ‘ಕೆ.ಎಸ್ ಈಶ್ವರಪ್ಪ’ ಸಿಎಂ ಬೊಮ್ಮಾಯಿ ಭೇಟಿಯಾಗಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಕೆ

ಬೆಂಗಳೂರು: ಶಿವಮೊಗ್ಗದಿಂದ ರಸ್ತೆ ಮಾರ್ಗದ ಮೂಲಕ ಆಗಮಿಸಿದಂತ ಸಚಿವ ಕೆ ಎಸ್ ಈಶ್ವರಪ್ಪ, ಸಿಎಂ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಈ ಮೂಲಕ ಅಧಿಕೃತವಾಗಿ ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಇಂದು ಶಿವಮೊಗ್ಗದಿಂದ ಹೊರಟಂತ ಅವರು, ಮಾರ್ಗ ಮಧ್ಯೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಸ್ವಾಮೀಜಿಯ ಆಶೀರ್ವಾದ ಪಡೆದರು. ಈ ಬಳಿಕ ಮಾತನಾಡಿದ ಅವರು, ನನ್ನ ರಾಜಕೀಯ ಜೀವನ ಇಲ್ಲಿಗೆ ಅಂತ್ಯವಾಗೋದಿಲ್ಲ. ನನ್ನ ರಾಜೀನಾಮೆಯಿಂದ ತನಿಖೆಯು ನಡೆದು ಸಂತೋಷ್ ಆತ್ಮಹತ್ಯೆ ಪ್ರಕರಣದ ಹಿಂದಿನ ಸತ್ಯಾಸತ್ಯತೆ ಹೊರಬರಲಿದೆ ಎಂದರು.

ಅಲ್ಲಿಂದ ಬೆಂಗಳೂರು ತಲುಪಿದಂತ ಅವರು, ರೇಸ್ ಕೋರ್ಸ್ ರಸ್ತೆಯಲ್ಲಿನ ಸಿಎಂ ಬಸವರಾಜ ಬೊಮ್ಮಾಯಿ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದರು. ಸಿಎಂ ಬೊಮ್ಮಾಯಿಯೊಂದಿಗೆ ಕೆಲ ಕಾಲ ಚರ್ಚಿಸಿದ ಅವರು, ಅಧಿಕೃತವಾಗಿ ಸಚಿವ ಸ್ಥಾನಕ್ಕೆ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ಈ ಮೂಲಕ ಸಿಎಂ ಬೊಮ್ಮಾಯಿಯವರ ಸಂಪುಟದ ಮೊದಲ ವಿಕೆಟ್ ಪತನವಾದಂತೆ ಆಗಿದೆ.

About The Author