ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಇಕ್ಕಟ್ಟಿಗೆ ಸಿಲುಕಿರುವಂತ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೆ, ಬಿಜೆಪಿ ಹೈಕಮಾಂಡ್ ರಾಜೀನಾಮೆಗೆ ಸೂಚಿಸಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ತಮ್ಮ ಸಚಿವ ಸ್ಥಾನಕ್ಕೆ ಇಂದೇ ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇಂದು ಮಧ್ಯಾಹ್ನ ಮಹತ್ವದ ಸುದ್ದಿಗೋಷ್ಠಿ ಕರೆದಿರುವಂತ ಸಚಿವ ಕೆ ಎಸ್ ಈಶ್ವರಪ್ಪ, ಈ ಕುರಿತಂತೆ ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು ಮಧ್ಯಾಹ್ನವೇ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸೋದಾಗಿ ತಿಳಿದು ಬಂದಿದೆ.ಾ




