Thursday, August 7, 2025

Latest Posts

KS Eshwarappa-ಈಶ್ವರಪ್ಪಾಗೆ ಬಿ ರಿಪೋರ್ಟ್ ಅಂಗಿಕರಿಸಿದ ನ್ಯಾಯಾಲಯ

- Advertisement -

ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮೇಲೆ 40% ಲಂಚದ ಆರೋಪದ ಮೇಲೆ ಅವರ ವಿರುದ್ದ ಪ್ರಕರಣ ದಾಖಲಾಗಿತ್ತು.ಗುತ್ತಿಗೆದಾರ ಸಂತೋಷ ಪಾಟೀಲ್ ಅವರು ಆತ್ಮಹತ್ಯಗೆ ಮಾಜಿ ಸಚಿ ವ ಕೆ ಎಸ್ ಈಶ್ವರಪ್ಪ ನವರೇ ಕಾರಣವೆಂದು  ವ್ಯಾಟ್ಸಪ್  ಚಾಟಿಂಗ್ ಮೂಲಕ ಸಾಬೀತು ಪಡಿಸಿ ಅವರ ವಿರುದ್ದ ಪ್ರಕರಣ ದಾಖಲಿಸಾಗಿತ್ತು ಆದರೆ ಈಗ ಆ ಆರೋಪದಿಂದ ಮಾಜಿ ಸಚಿವರು ಸುಧಾರಿಸಿಕೊಂಡಿದ್ದಾರೆ.

ಗುತ್ತಿಗೆದಾರ ಸಂತೋಷ್  ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ  ಅವರಿಗೆ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್  ಅಂಗೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್​​ ಸಲ್ಲಿಕೆ ಮಾಡಿದ್ದರು

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ.ಎಸ್‌. ಈಶ್ವರಪ್ಪ ಅವರು ಗ್ರಾಮೀಣ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸಚಿವರಾಗಿದ್ದಾಗ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ 2022ರ ಏಪ್ರಿಲ್ 12 ರಂದು ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಕಮೀಷನ್‌ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಗ್ರಾಮೀಣ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸಚಿವರಾದ ಕೆಎಸ್​​ ಈಶ್ವರಪ್ಪ ಅವರ ವಿರುದ್ಧ ಆರೋಪ ಕೇಳಿಬಂದಿತ್ತು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಬಳಿಕ ಕೆಎಸ್​ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಹೈವೇಯಲ್ಲಿನ  ದರೋಡೆ…!

Mahadaayi- ಹೋರಾಟಕ್ಕೆ ಮುಂದಾದ ಮಹಾದಾಯಿ ರೈತರು

Chicks : ಕೋಳಿ ಮರಿಯನ್ನು ಹಾರಿಸುವ ವಿಶೇಷ ಜಾತ್ರೆ

- Advertisement -

Latest Posts

Don't Miss