ನಾಳೆ ಸಚಿವ ಸ್ಥಾನಕ್ಕೆ ‘ಕೆ.ಎಸ್ ಈಶ್ವರಪ್ಪ’ ರಾಜೀನಾಮೆ.?

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪಗೆ ರಾಜೀನಾಮೆಯ ತೂಗುಗತ್ತಿಗೆ ಸಿಲುಕುವಂತಾಗಿದೆ. ಈಗಾಗಲೇ ಹಲವು ಬಾರಿ ವಿವಾದಾತ್ಮಕ ಕಾರಣದಿಂದಾಗಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದಂತ ಹಿರಿಯ ಮಂತ್ರಿ ಕೆ ಎಸ್ ಈಶ್ವರಪ್ಪ ಅವರು ವಿರುದ್ಧ ಈಗ ಕೇಳಿ ಬಂದಿರುವಂತ ಆರೋಪದಲ್ಲಿ ಪಕ್ಷಕ್ಕೆ ಡ್ಯಾಮೇಜ್ ಆಗೋದಾಗಿ ಬಗ್ಗೆ ವರಿಷ್ಠರಿಗೆ ಸೂಚನೆ ಸಿಕ್ಕಿದೆ. ಈ ಹಿನ್ನಲೆಯಲ್ಲಿಯೇ ನಾಳೆ ಪಕ್ಷಕ್ಕೆ ಮುಜುಗರವಾಗುವುದನ್ನು ತಪ್ಪಿಸೋ ಕಾರಣದಿಂದ ಸಚಿವ ಸ್ಥಾನಕ್ಕೆ ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಲಿದೆ ಎನ್ನಲಾಗುತ್ತಿದೆ.

ಈ ಸಂಬಂಧ ಬಿಜೆಪಿ ರಾಷ್ಟ್ರೀಯ ನಾಯಕರು ಚರ್ಚೆ ನಡೆಸಿದ್ದು, ಸಿಎಂ ಬಸವರಾಜ ಬೊಮ್ಮಾಯಿಯವರಿಗೂ ಪಕ್ಷಕ್ಕೆ ಮುಚುಗರವಾಗದಂತೆ ನಿರ್ಧಾರವನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇತ್ತೀಚಿನ ಹಿಂದುತ್ವ ವಿವಾದದಿಂದಾಗಿ ಈಗಾಗಲೇ ರಾಜ್ಯದಲ್ಲಿ ಪಕ್ಷದ ವರ್ಚಸ್ಸು ಕುಸಿದಿದ್ದು, ಈ ನಡುವೆಯೂ ಕಾಯಕಲ್ಪ ನಡೆಸಲು ಮಾಡಿದ ಸಂದರ್ಭದಲ್ಲಿಯೇ ಈಗ ಸಚಿವ ಈಶ್ವರಪ್ಪ ಹೆಸರು ಹೇಳಿ ಆತ್ಮಹತ್ಯೆಗೆ ಶರಣಾಗಿರುವಂತ ಸಂತೋಷ್ ಪ್ರಕರಣ ಹಿರಿಯ ನಾಯಕರನ್ನು ಮುಜುಗರಕ್ಕೆ ಈಡುಮಾಡಿದೆ.

ಇದಷ್ಟೇ ಅಲ್ಲದೇ ಈ ಹಿಂದೆ ಕೆಂಪುಕೋಟೆಯ ಮೇಲೆ ಮುಂದೊಂದು ದಿನ ಕೇಸರಿ ಧ್ವಜ ಹಾರಾಡಬಹುದು ಎನ್ನುವ ವಿವಾದಾತ್ಮಕ ಹೇಳಿಕೆಯಿಂದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಕೂಡ ಬೇಸರಗೊಂಡಿದ್ದರು. ಈ ಸಂಬಂಧ ಟ್ವಿಟ್ ಮಾಡಿದ್ದಂತ ಅವರು, ಬುದ್ಧಿವಾದ ಹೇಳಿದ್ದಾಗಿಯೂ ತಿಳಿಸಿದ್ದರು. ಈ ಬೆನ್ನಲ್ಲೇ ಈಗ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ವಿವಾದಕ್ಕೆ ಸಿಲುಕಿರೋ ಕಾರಣ, ಅವರ ರಾಜೀನಾಮೆ ಪಡೆಯುವ ಬಗ್ಗೆಯೂ ಚಿಂತನೆ ನಡೆಸಿದೆ. ನಾಳೆ ಹಿರಿಯ ಮಂತ್ರಿ ಕೆ ಎಸ್ ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.

About The Author