ಬೆಂಗಳೂರು: ಏಪ್ರಿಲ್ 22 ರಿಂದ ಮೇ.18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿ ಪಡಿಸಲಾಗಿದೆ. ಈ ಪರೀಕ್ಷೆಯಂದು ವಿದ್ಯಾರ್ಥಿಗಳು ಪರೀಕ್ಷೆಯ ದಿನಾಂಕದ ವೇಳೆಯಲ್ಲಿ ಪರೀಕ್ಷೆಗೆ ಮನೆಯಿಂದ ತೆರಳಿ, ಮರಳಿ ಬರೋದಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.
ಕೆ ಎಸ್ ಆರ್ ಟಿ ಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ಬಿಡುಗಡೆ ಮಾಡಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಮನವಿಯ ಮೇರೆಗೆ ದ್ವಿತೀಯ ಪಿಯು ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಸಮಯದಲ್ಲಿ ಕೆ ಎಸ್ ಆರ್ ಟಿ ಸಿಯ ಬಸ್ ಗಳಲ್ಲಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ ಎಂದು ಹೇಳಿದೆ.
ಇನ್ನೂ ಕೆ ಎಸ್ ಆರ್ ಟಿ ಸಿ ಬಸ್ ಸಾಗುವಂತ ಮಾರ್ಗದಲ್ಲಿಯೇ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರವಿದ್ದರೇ, ಅಲ್ಲಿಯೇ ಕೋರಿಕೆಯ ನಿಲುಗಡೆ ನೀಡಿ, ವಿದ್ಯಾರ್ಥಿಗಳನ್ನು ಇಳಿಸೋದು, ಪರೀಕ್ಷೆ ಬರೆದಂತ ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಬರುವಂತೆಯೂ ಚಾಲಕ, ನಿರ್ವಾಹಕರಿಗೆ ಸೂಚಿಸಿದೆ.




