Political News: ಟೋಲ್ ದರ ಏರಿಸಿದ್ದಕ್ಕಾಗಿ ಮಾಜಿ ಸಿಎಂ ಕುಮಾರಸ್ವಾಮಿ, ಟ್ವೀಟ್ ಮೂಲಕ, ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನ್ಯಾಷನಲ್ ಹೈವೇ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ. ಬಿಜೆಪಿ ಮತ್ತು ಕಾಂಗ್ರೆಸ್ ಸರಕಾರಗಳೆರಡೂ ಸೇರಿ ಜನರ ಮೇಲೆ ಮತ್ತಷ್ಟು ಭಾರ ಹೊರೆಸಿವೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಅಲ್ಲದೇ, ಹೆದ್ದಾರಿ ಪ್ರಾಧಿಕಾರವು ಹೆಚ್ಚಳ ಮಾಡಿರುವ ಟೋಲ್ ದರವನ್ನು ಕೂಡಲೇ ಹಿಂಪಡೆಯಬೇಕು. ಹೆದ್ದಾರಿ ಪ್ರಾಧಿಕಾರದ ಮೇಲೆ ರಾಜ್ಯ ಸರಕಾರ ಒತ್ತಡ ಹಾಕಬೇಕು. ಬೆಲೆಬರೆ ಬವಣೆಯಿಂದ ಬಸವಳಿದಿರುವ ಜನರು ರೊಚ್ಚಿಗೇಳುವ ಮುನ್ನ ಟೋಲ್ ದರ ಇಳಿಯಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿರುವುದು ಶ್ರೀ ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ?? ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ. ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ನೆಹರೂ ಕ್ರೀಡಾಂಗಣದಲ್ಲಿ ಪಾಲಿಕೆ ಆಯುಕ್ತರಿಂದ ಭರ್ಜರಿ ಬ್ಯಾಟಿಂಗ್, ಶಾಸಕ ತೆಂಗಿನಕಾಯಿ ಟೆಂಗಿನಕಾಯಿ ಸಾಥ್
‘ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಆನ್‌ಲೈನ್ ಸೆಂಟರ್‌ಗಳನ್ನ ಬಿಜೆಪಿಯಿಂದ ತೆರೆಯುತ್ತೇವೆ’
ಬಾಗೇಪಲ್ಲಿ ಸೊಸೈಟಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 9 ನಿರ್ದೇಶಕರ ಗೆಲುವು: ಅಭಿನಂದನಾ ಸಮಾರಂಭ