ಬೆಂಗಳೂರು: ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ಯಾವುದಕ್ಕೂ ಜೆಡಿಎಸ್ ಕಾರ್ಯಕರ್ತರು ಸಿದ್ಧವಾಗಿರಿ ಅಂತ ಕಾರ್ಯಕರ್ತರಿಗೆ ನಿಖಿಲ್ ಹೇಳಿದ್ದ ಮಾತಿಗೆ ತಂದೆ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗೋದು ಸುಳ್ಳು ಅಂತ ಸಿಎಂ ಹೇಳಿದ್ದಾರೆ.
ಮಂಡ್ಯದಲ್ಲಿ ಕಾರ್ಯಕರ್ತರಿಗೆ ನಿಖಿಲ್ ಚುನಾವಣೆಗೆ ಸಿದ್ಧವಾಗುವಂತೆ ಪಕ್ಷದ ಕಾರ್ಯಕರ್ತರಿಗೆ ನೀಡಿದ್ದ ಸೂಚನೆಗೆ ಸಿಎಂ ಇದೀಗ ತಮ್ಮದೇ ಆದ ವಿವರಣೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರೋ ಕುಮಾರಸ್ವಾಮಿ, ಪಕ್ಷದ ಕಾರ್ಯಕರ್ತರು ಸದಾ ಸಮಾಜ ಸೇವೆಗೆ ಸನ್ನದ್ಧರಾಗಿರಬೇಕು, ಪಕ್ಷವನ್ನು ಚುರುಕಾಗಿಟ್ಟಿರಬೇಕು ಅನ್ನೋ ನಿಟ್ಟಿನಲ್ಲಿ ನಿಖಿಲ್ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಿದ್ದಾರೆ ಅಷ್ಟೇ.ಇದನ್ನು ಸಂದರ್ಭರಹಿತವಾಗಿ ಮಾಧ್ಯಮಗಳಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ಚುನಾವಣೆ ಯಾವಾಗ ಬೇಕಾದರೂ ಎದುರಾಗಬಹುದು ಎನ್ನುವಂತೆ ಬಿಂಬಿಸಲಾಗಿದೆ. ಇದು ವಾಸ್ತವಕ್ಕೆ ದೂರವಾದ ಸಂಗತಿ. ಮೈತ್ರಿ ಸರ್ಕಾರ ತನ್ನ ೫ ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸುತ್ತದೆ .ಮಧ್ಯಂತರ ಚುನಾವಣೆಯ ವಿಷಯವೇ ಈಗ ಅಪ್ರಸ್ತುತ ಅಂತ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಅಷ್ಟಕ್ಕೂ ನಿಖಿಲ್ ಕಾರ್ಯಕರ್ತರಿಗೆ ಹೇಳಿದ್ದೇನು ಗೊತ್ತಾ…? ಮಿಸ್ ಮಾಡದೇ ಈ ವಿಡಿಯೋ ನೋಡಿ