Political News: ಸಿಎಂ ಸಿದ್ದರಾಮಯ್ಯ, ಇಂದು ಕೂಡ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೆಚ್ಡಿಕೆ ಇಂದು ಪತ್ರಿಕಾಗೋಷ್ಠಿ ನಡೆಸಿ, ಸಿಎಂ ಮತ್ತು ಅವರ ಮಗನ ವಿರುದ್ಧ ವಾಗ್ದಾಳಿ ನಡೆಸಿದ್ದು, ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೆನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು ಎಂದು ಹೇಳಿದ್ದಾರೆ.
ಜೆಡಿಎಸ್ ಅಥವಾ ಬಿಜೆಪಿಯ ನಾಯಕರು ಕಾಂಗ್ರೆಸ್ ನ ಸಿದ್ಧಾಂತ ಹಾಗೂ ನಾಯಕತ್ವವನ್ನು ಒಪ್ಪಿ ಬಂದಲ್ಲಿ ಅವರನ್ನು ಸ್ವಾಗತಿಸಲಾಗುವುದು. ರಾಜ್ಯದ ಒಟ್ಟು 224 ಸ್ಥಾನದಲ್ಲಿ 136 ನ್ನು ಕಾಂಗ್ರೆಸ್ ಪಡೆದಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್‌ನ ಶಕ್ತಿಯನ್ನು ವಿಸ್ತರಿಸಬೇಕಿದೆ. ಕೋಮುವಾದಿ ಪಕ್ಷಗಳು ಮತ್ತೆ ಅಧಿಕಾರಕ್ಕೆ ಬರಬಾರದು. ಜೆಡಿಎಸ್ ನ ಕುಮಾರಸ್ವಾಮಿಯವರು ಕೇವಲ ದ್ವೇಷ ಹಾಗೂ ಅಸೂಯೆಗಳ ರಾಜಕಾರಣ ಮಾಡುತ್ತಾರೆ. ನನ್ನ ಮಗ ಯತೀಂದ್ರ ಆಶ್ರಯ ಸಮಿತಿ ಅಧ್ಯಕ್ಷನಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದರೆ, ಅವರ ಮೇಲೆ ವೃಥಾ ಆರೋಪ ಮಾಡುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಇದುವರೆಗೂ ದ್ವೇಷದ ರಾಜಕಾರಣವನ್ನು ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ. ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು.
ಮಾಜಿ ಮುಖ್ಯಮತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಇಂದು ಕೂಡ ಪತ್ರಿಕಾಗೋಷ್ಠಿ ಕರೆದು ಸುಳ್ಳು ಸುಳ್ಳು ಆರೋಪ ಮಾಡಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಅವರು ಚರ್ಚೆ ಮಾಡಲಿ, ಆಗ ಉತ್ತರ ಕೊಡುತ್ತೇವೆ. ಸರ್ಕಾರ ಓಡಿಹೋಗುವುದಿಲ್ಲ. ಕುಮಾರಸ್ವಾಮಿಯವರು ಯಾವಾಗ ಸತ್ಯ ಹೇಳಿದ್ದಾರೆ? ಯಾವಾಗಲೂ ಹಿಟ್ ಅಂಡ್ ರನ್ ಕೇಸ್ ಅವರದ್ದು. ಸುಳ್ಳನ್ನೆಲ್ಲಾ ತನಿಖೆ ಮಾಡಿಸಲು ಆಗುವುದಿಲ್ಲ. ಏನಾದರೂ ಆಧಾರ ಇದ್ದರೆ, ದಾಖಲಾತಿ ಇದ್ದರೆ ತನಿಖೆ ಮಾಡಬಹುದು. ಹೆಚ್.ಡಿ ಕುಮಾರಸ್ವಾಮಿಯವರು ಅವರ ಭ್ರಷ್ಟಾಚಾರಗಳ ಬಗ್ಗೆ ತನಿಖೆ ಮಾಡುವಂತೆ ಸವಾಲು ಹಾಕಿದ್ದಾರೆ. ತನಿಖೆ ಮಾಡಬೇಕಾಗಿ ಬಂದರೆ ಮಾಡುತ್ತೇವೆ, ಅದರಲ್ಲಿ ಹಿಂದೆ ಹೋಗುವ ಪ್ರಶ್ನೆಯೇ ಇಲ್ಲ. ಕುಮಾರಸ್ವಾಮಿಯಾಗಲಿ, ನಮ್ಮ ಪಕ್ಷದವರಾಗಲಿ ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಜೆಡಿಎಸ್ ಅಥವಾ ಬಿಜೆಪಿಯ ನಾಯಕರು ಕಾಂಗ್ರೆಸ್ ನ ಸಿದ್ಧಾಂತ ಹಾಗೂ ನಾಯಕತ್ವವನ್ನು ಒಪ್ಪಿ ಬಂದಲ್ಲಿ ಅವರನ್ನು ಸ್ವಾಗತಿಸಲಾಗುವುದು. ರಾಜ್ಯದ ಒಟ್ಟು 224 ಸ್ಥಾನದಲ್ಲಿ 136 ನ್ನು ಕಾಂಗ್ರೆಸ್ ಪಡೆದಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್‌ನ ಶಕ್ತಿಯನ್ನು ವಿಸ್ತರಿಸಬೇಕಿದೆ. ಕೋಮುವಾದಿ ಪಕ್ಷಗಳು ಮತ್ತೆ ಅಧಿಕಾರಕ್ಕೆ ಬರಬಾರದು.… pic.twitter.com/pslBozRlxG
— Siddaramaiah (@siddaramaiah) November 17, 2023
ಮಾಜಿ ಮುಖ್ಯಮತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಇಂದು ಕೂಡ ಪತ್ರಿಕಾಗೋಷ್ಠಿ ಕರೆದು ಸುಳ್ಳು ಸುಳ್ಳು ಆರೋಪ ಮಾಡಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಅವರು ಚರ್ಚೆ ಮಾಡಲಿ, ಆಗ ಉತ್ತರ ಕೊಡುತ್ತೇವೆ. ಸರ್ಕಾರ ಓಡಿಹೋಗುವುದಿಲ್ಲ. ಕುಮಾರಸ್ವಾಮಿಯವರು ಯಾವಾಗ ಸತ್ಯ ಹೇಳಿದ್ದಾರೆ? ಯಾವಾಗಲೂ ಹಿಟ್ ಅಂಡ್ ರನ್ ಕೇಸ್ ಅವರದ್ದು. ಸುಳ್ಳನ್ನೆಲ್ಲಾ ತನಿಖೆ…
— Siddaramaiah (@siddaramaiah) November 17, 2023