Monday, December 23, 2024

Latest Posts

‘ಕಾಂಗ್ರೆಸ್ ಸರ್ಕಾರ ಹಾಲಿನ ಬೆಲೆ ಹೆಚ್ಚಿಸಿ, ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ’

- Advertisement -

Political News: ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಹಾಲಿನ ದರ ಹೆಚ್ಚಿಸಿದ್ದಕ್ಕೆ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಹಾಲಿನ ದರ ಹೆಚ್ಚಳ ಮಾಡಿದ್ದಕ್ಕೆ, ಗೃಹಜ್ಯೋತಿ ಹೆಸರಿನಲ್ಲಿ ಆರಂಭದಲ್ಲೇ ಕರೆಂಟ್ ಶಾಕ್ ಕೊಟ್ಟಿದ್ದಕ್ಕೆ, ದನಕ್ಕೆ ಹಾಕುವ ಹಿಂಡಿ ಬೆಲೆ ಹೆಚ್ಚಳದ ಬಗ್ಗೆ ಹೀಗೆ ಸರ್ಕಾರದ ಹಲವು ತಪ್ಪುಗಳನ್ನು ಕುಮಾರಸ್ವಾಮಿ ಬೊಟ್ಟು ಮಾಡಿ ತೋರಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ.

ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್ ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ.

ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ. ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. 

‘ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಥೇಟ್ ನಾಗವಲ್ಲಿಯ ತರ. ಕುರುಡನ ಹೆಗಲ ಮೇಲೆ ಕುಂಟನ ಸವಾರಿ’

VidhanaSabha : ವಿಪಕ್ಷನಾಯಕನಿಲ್ಲದೆ ಸದನ ಕಲಾಪ ಮುಕ್ತಾಯ ..! ಇತಿಹಾಸದಲ್ಲೇ ಮೊದಲು..!

Congress : ನಾಯಕತ್ವವಿಲ್ಲದ ಬಿಜೆಪಿಗೆ ಜೆಡಿಎಸ್ ನಿಂದ  ನಾಯಕನ ಎರವಲು….?! : ಕಾಂಗ್ರೆಸ್  ಟ್ವೀಟ್

- Advertisement -

Latest Posts

Don't Miss