Political News: ಚುನಾವಣೆ ಸೋಲಿನಿಂದ ಕುಮಾರಸ್ವಾಮಿಯವರು ಹತಾಶರಾಗಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ, ಟ್ವೀಟ್ ಮಾಡುವ ಮೂಲಕ, ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಲಂಚ ಆರೋಪದ ಬಗ್ಗೆ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ವಾಗ್ದಾಳಿ ನಡೆಸಿದ್ದಾರೆ.
ನಮ್ಮ ಸೋಲಿನ ಆಘಾತ ಇರಲಿ, ನಿಮ್ಮ ಶಾಸಕರ ವರಾತದ ಕಥೆ ಏನು? 136 ಸೀಟು ಎಂದು ಬೀಗುತ್ತಿದ್ದೀರಿ, ಹಣದುಬ್ಬರದಂತೆ ‘ಅತಿ ಉಬ್ಬರ’ವೂ ದೇಶಕ್ಕೆ ಒಳ್ಳೆಯದಲ್ಲ. ಸಭ್ಯ ಭಾಷೆಯಲ್ಲೇ ತಮಗೆ ಹೇಳುತ್ತಿದ್ದೇನೆ. ಅರ್ಥವಾಗಿದೆ ಎಂದು ಭಾವಿಸುತ್ತೇನೆ.
ಭ್ರಷ್ಟಾಚಾರದ ಆರೋಪವನ್ನೇ ಅನುಕಂಪವನ್ನಾಗಿ ಪರಿವರ್ತಿಸಿಕೊಳ್ಳುವ ‘ಸಿದ್ದಕಲೆ’ ನನಗಂತೂ ಗೊತ್ತಿಲ್ಲ. ಒಂದೇ ಹುದ್ದೆಗೆ ಸಿಎಂ ಕಚೇರಿಯ ಐದಾರು ಟಿಪ್ಪಣಿಗಳು ‘ನಡೆದಂತೆ ಎಲ್ಲವನ್ನೂ ನುಡಿಯುತ್ತಿವೆ’ ಹಾಗೂ ಆಯ್ದ ಕಿಸೆಗಳನ್ನು ಭರ್ತಿ ತುಂಬುತ್ತಿವೆ!
‘ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ!’ ಇದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರ ಹೊಸ ಹೇಳಿಕೆ. ಇದೇ ಕೆಂಪಣ್ಣನವರ 40% ಆರೋಪವನ್ನೇ ಅಸ್ತ್ರ ಮಾಡಿಕೊಂಡು,ಕೆಂಪಣ್ಣನವರ ಕೃಪಾಕಟಾಕ್ಷದಿಂದಲೇ ಅಧಿಕಾರಕ್ಕೆ ಬಂದಿದ್ದೀರಿ. ಈಗ ಅವರನ್ನೇ ಬೆಂಕಿಗೆ ಹಾಕಲು ಹೊರಟಿದ್ದೀರಿ. ಇದು ಎಂಥಾ ಮನಃಸ್ಥಿತಿ? ಇದಕ್ಕೆ ಚಿಕಿತ್ಸೆ ಬೇಡವೇ? ಎಂದು ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯನವರಿಗೆ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.
'ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ!'
ಇದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರ ಹೊಸ ಹೇಳಿಕೆ. ಇದೇ ಕೆಂಪಣ್ಣನವರ 40% ಆರೋಪವನ್ನೇ ಅಸ್ತ್ರ ಮಾಡಿಕೊಂಡು,ಕೆಂಪಣ್ಣನವರ ಕೃಪಾಕಟಾಕ್ಷದಿಂದಲೇ ಅಧಿಕಾರಕ್ಕೆ ಬಂದಿದ್ದೀರಿ. ಈಗ ಅವರನ್ನೇ ಬೆಂಕಿಗೆ ಹಾಕಲು ಹೊರಟಿದ್ದೀರಿ. ಇದು ಎಂಥಾ ಮನಃಸ್ಥಿತಿ? ಇದಕ್ಕೆ ಚಿಕಿತ್ಸೆ ಬೇಡವೇ?1/5#CongressTax pic.twitter.com/PwgPYfTLoK— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 9, 2023
ಭ್ರಷ್ಟಾಚಾರದ ಆರೋಪವನ್ನೇ ಅನುಕಂಪವನ್ನಾಗಿ ಪರಿವರ್ತಿಸಿಕೊಳ್ಳುವ 'ಸಿದ್ದಕಲೆ' ನನಗಂತೂ ಗೊತ್ತಿಲ್ಲ. ಒಂದೇ ಹುದ್ದೆಗೆ @CMofKarnataka ಕಚೇರಿಯ ಐದಾರು ಟಿಪ್ಪಣಿಗಳು 'ನಡೆದಂತೆ ಎಲ್ಲವನ್ನೂ ನುಡಿಯುತ್ತಿವೆ' ಹಾಗೂ ಆಯ್ದ ಕಿಸೆಗಳನ್ನು ಭರ್ತಿ ತುಂಬುತ್ತಿವೆ! 4/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 9, 2023
ನಮ್ಮ ಸೋಲಿನ ಆಘಾತ ಇರಲಿ, ನಿಮ್ಮ ಶಾಸಕರ ವರಾತದ ಕಥೆ ಏನು? 136 ಸೀಟು ಎಂದು ಬೀಗುತ್ತಿದ್ದೀರಿ, ಹಣದುಬ್ಬರದಂತೆ 'ಅತಿ ಉಬ್ಬರ'ವೂ ದೇಶಕ್ಕೆ ಒಳ್ಳೆಯದಲ್ಲ.
ಸಭ್ಯ ಭಾಷೆಯಲ್ಲೇ ತಮಗೆ ಹೇಳುತ್ತಿದ್ದೇನೆ. ಅರ್ಥವಾಗಿದೆ ಎಂದು ಭಾವಿಸುತ್ತೇನೆ. 5/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 9, 2023
ಗುತ್ತಿಗೆದಾರರು ಬೇರೆ ನಾಯಕರ ಭೇಟಿ ಮಾಡೋದನ್ನು ತಡೆಯಲಾಗದು: ಡಿಸಿಎಂ ಡಿ.ಕೆ. ಶಿವಕುಮಾರ್
ಭಗವಂತನನ್ನು ಪ್ರಶ್ನೆ ಮಾಡಲಾಗದು, ಆದರೆ ಸ್ಪಂದನಾ ಸಾವು ಘೋರ ಅನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್




