‘ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರ ಹಿಂತೆಗೆದುಕೊಳ್ಳಲಿ’

ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕೋವಿಡ್19 ಪರಿಸ್ಥಿತಿ ಎದುರಾದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ. ಕವಡೆ ಕಾಸಿಗೆ ಸ್ಥಳೀಯ ಸಂಸ್ಥೆಗಳ ಜಮೀನನ್ನು ಗುತ್ತಿಗೆ ನೀಡಿರುವ ಸರ್ಕಾರ ಮಾರಾಟ ನಿರ್ಧಾರ ಕೈಬಿಟ್ಟು, ಬಾಡಿಗೆ ಹೆಚ್ಚಿಸಲು ಮುಂದಾಗಬೇಕು ಎಂದು ಹೆಚ್ಡಿಕೆ ಆಗ್ರಹಿಸಿದ್ದಾರೆ.

ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನನ್ನು ಮಾರಾಟ ಮಾಡಿದರೆ, ಮುಂದೆ ಸಾರ್ವಜನಿಕ ಅವಶ್ಯಕತೆಗಳಿಗೆ ಸರ್ಕಾರಿ ಜಮೀನು ಇಲ್ಲದಂತಾಗುತ್ತದೆ. ಅಗತ್ಯ ಬಿದ್ದಾಗ ಖಾಸಗಿ ಅವರ ಎದುರು ಅಂಗಲಾಚಬೇಕಾದ ದೈನೇಸಿ ಸ್ಥಿತಿ ನಿರ್ಮಾಣವಾಗುತ್ತದೆ ಎಂದಿದ್ದಾರೆ.

ಬೊಕ್ಕಸ ತುಂಬಿಸಿಕೊಳ್ಳಲು ಬಿಡಿಎ ನಿವೇಶನಗಳನ್ನು ಹರಾಜು ಹಾಕುತ್ತಿರುವ ಸರ್ಕಾರ ಇದೀಗ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ನೀಡಿರುವ ಜಮೀನಿನ ಮೇಲೆ ಕಣ್ಣಿಟ್ಟಿದೆ. ಇಂತಹ ತಾತ್ಕಾಲಿಕ ಉಪಶಮನಗಳಿಂದ ಸರ್ಕಾರ ಶಾಶ್ವತವಾಗಿ ಬೊಕ್ಕಸ ತುಂಬಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೆಚ್ಡಿಕೆ ಹೇಳಿದ್ದಾರೆ.

ಸುಮಾರು 5000 ಕೋಟಿ ರೂಪಾಯಿಗಳ ಆದಾಯದ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರ ಇರುವುದನ್ನು ಕಳೆದುಕೊಳ್ಳುವ ಈ ಪ್ರಸ್ತಾವನೆಯನ್ನು ಸಾರಾಸಗಟಾಗಿ ತಿರಸ್ಕರಿಸುವಂತೆ ಆಗ್ರಹಿಸುತ್ತೇನೆ ಎಂದಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author