ಕೋಲಾರ.
ಮುಖ್ಯಮಂತ್ರಿಗಳ ಸ್ಥಾನದಲ್ಲಿ ಯಾವ ರೀತಿ ನಡೆಯುತ್ತದೆ ಎನ್ನುವುದು ಕುಮಾರಸ್ವಾಮಿ ಅವರಿಂದ ಸಿದ್ದರಾಮಯ್ಯ ಅವರು ಕಲಿಯುವ ಅವಶ್ಯಕತೆ ಇಲ್ಲ ಎಂದು ಕೋಲಾರದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಕುಮಾರಸ್ವಾಮಿ ಅವರ ವರ್ಗಾವಣೆ ದಂಧೆ ಆರೋಪದ ಕುರಿತು , ಕುಮಾರಸ್ವಾಮಿ ಅವರು ಹಿರಿಯರು ಎರಡು ಬಾರಿ ಮುಖ್ಯಮಂತ್ರಿಗಳಾಗಿದ್ದವರು, ಮುಖ್ಯಮಂತ್ರಿ ಸ್ಥಾನದಲ್ಲಿ ಯಾವ ರೀತಿ ನಡೆಯಬಹುದು ಎಂದು ಕುಮರಸ್ವಾಮಿ ಅವರಿಂದ ಸಿದ್ದರಾಮಯ್ಯ ಕಲಿಯುವ ಅವಶ್ಯಕತೆ ಇಲ್ಲ ಎಂದರು. ಅಲ್ಲದೆ 40% ಕಮಿಷನ್ ಸೇರಿದಂತೆ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಕುರಿತು ಟೀಕೆ ಮಾಡಿರುವ ನಾವು ಬಹಳ ಜವಾಬ್ದಾರಿಯಿಂದ ಸರ್ಕಾರ ನಡೆಸುತ್ತಿದ್ದೇವೆ ಎಂದು ಹೇಳಿದ್ರು. ಅಲ್ಲದೆ ಕುಮಾರಸ್ವಾಮಿ ಅವರು ಹೇಳಿದ ರೀತಿಯಲ್ಲಿ ವ್ಯವಸ್ಥೆ ಇಲ್ಲ, ಬಹುಶ ಅವರು ರಾಜಕೀಯ ಹೇಳಿಕೆ ಕೊಟ್ಟಿದ್ದಾರೆ ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದರು. ಇನ್ನೂ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಮಾತನಾಡಿ ಈಗಾಗಲೇ ಬಿಜೆಪಿ ಅಧಿಕಾರದಲ್ಲಿರುವುದರ ಕಡೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಲ್ಲಿದೆ. ಆದರೆ ಕಾಂಗ್ರೇಸ್ ಪಕ್ಷದ ಪ್ರಣಾಳಿಕೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಬದಲಿಗೆ ರಾಜ್ಯ ಶಿಕ್ಷಣ ನೀತಿ ತರುವುದಾಗಿ ಹೇಳಿದ್ದೇವೆ. ಈಗಾಗಲೇ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ವಿದ್ಯಾರ್ಥಿಗಳು ಎರಡು ವರ್ಷ ವ್ಯಾಸಾಂಗ ಮಾಡಿದ್ದಾರೆ, ಹೀಗಾಗಿ ಬಹಳ ಯೋಚನೆ ಮಾಡಿ ತೀರ್ಮಾನ ತೆಗೆದುಕೊಳ್ಳಬೇಕು ಎಂದರು. ಇನ್ನೂ ಈ ಕುರಿತು ಶಿಕ್ಷಣ ತಜ್ಞರೊಂದಿಗೆ ಚರ್ಚೆ ಮಾಡಿದ್ದೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯನ್ನ ಗಮನದಲ್ಲಿ ಇರಿಸಿಕೊಂಡು, ಬದಲಾವಣೆ ಯಾವ ರೀತಿ ತರಬೇಕೆಂದು ತೀರ್ಮಾನಿಸಲಾಗುವುದು ಎಂದರು.