ಕುಂದಗೋಳ: ತಾಲೂಕಿನ ಸಂಶಿ ಗ್ರಾಮದಲ್ಲಿ ಮಾದಿಗ ಸಮುದಾಯಕ್ಕೆ ಶವ ಸಂಸ್ಕಾರ ಮಾಡಲು ರುದ್ರ ಭೂಮಿಯೇ ಇಲ್ಲಾ ಎನ್ನುವುದು ವಿಪರ್ಯಾಸದ ಸಂಗತಿಯಾಗಿದೆ, ಇಂದು ತಹಶೀಲ್ದಾರ್ ಕಚೇರಿಗೆ ಬಂದು ತಹಶೀಲ್ದಾರ್ ಸರ್ ಗೆ ಮನವಿ ಪತ್ರವನ್ನು ನೀಡಿದ್ದಾರೆ.
ಹೌದು! ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ ಸುಮಾರು ನೂರೈವತ್ತ ರಿಂದ ಎರಡು ನೂರುರ ವರೆಗೆ ಇದೆ ಆದರೆ ಈ ಸಮುದಾಯದ ಜನರಿಗೆ ಶವ ಸಂಸ್ಕಾರ ಮಾಡಲು ಒಂದು ನಿರ್ದಿಷ್ಟ ಸ್ಥಳಾವಕಾಶ ಇಲ್ಲಾ . ಈ ಮೊದಲು ಮಾದಿಗ ಸಮುದಾಯದ ಜನರು ಗ್ರಾಮದ ಹೊರವಲಯದಲ್ಲಿ ಇರುವ ಒಂದು ಜಮೀನಿನಲ್ಲಿ ಮಾಡುತ್ತಿದ್ದರು. ಆದರೆ ಈಗ ಆ ಜಮೀನಿನ ಮಾಲೀಕರು ನೀವು ನಮ್ಮ ಜಮೀನಿನಲ್ಲಿ ಶವ ಸಂಸ್ಕಾರ ಮಾಡಬೇಡಿ ಎಂದು ಹೇಳಿದರು, ಇದರಿಂದಾಗಿ ನಮ್ಮ ಸಮುದಾಯಕ್ಕೆ ಶವ ಸಂಸ್ಕಾರ ಮಾಡಲು ಜಾಗ ಇಲ್ಲಾ ಎಂದು ಹೇಳುತ್ತಿದ್ದಾರೆ.
ಒಟ್ಟಿನಲ್ಲಿ ಹೇಳುವುದಾದರೆ ಎಲ್ಲಾ ಸಮುದಾಯಗಳಿಗೂ ರುದ್ರ ಭೂಮಿ ಇರಬೇಕು ಸಂಬಂಧ ಪಟ್ಟ ಅಧಿಕಾರಿಗಳು ಈ ಬಗ್ಗೆ ಆದಷ್ಟು ಬೇಗನೆ ಕ್ರಮ ಕೈಗೊಳ್ಳಬೇಕು.
https://karnatakatv.net/wp-admin/post.php?post=69488&action=edit
Narendra Modi : ಪ್ರಧಾನಿ ಮೋದಿಗೆ ಫ್ರಾನ್ಸ್ ನ ಅತ್ಯುನ್ನತ ಗೌರವ ಪ್ರಶಸ್ತಿ