Kundagola News: ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ – ಮೂವರ ಬಂಧನ

Dharwad News: ಕುಂದಗೋಳ ತಾಲೂಕಿನಲ್ಲಿರುವ ಜೂಜಾಟ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕುಂದಗೋಳ ಪಟ್ಟಣದಿಂದ ಬಿಡ್ನಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಬಳಿ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕುಂದಗೋಳ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿದರು.

ದಾಳಿಯ ವೇಳೆ ಜೂಜಾಟದಲ್ಲಿ ತೊಡಗಿದ್ದ ಐವರ ಪೈಕಿ ಮೂವರನ್ನು ಪೊಲೀಸರು ಬಂಧಿಸಿದರು. ಬಂಧಿತರಿಂದ 1 ಸಾವಿರ 570 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ವಿನಾಯಕ ಪಾಯಕ್ಕನವರ, ಅನ್ವರ್ ಹರಕುಣಿ ಹಾಗೂ ಅರುಣ್ ಪಾಯಕ್ಕನವರ ಬಂಧಿತ ಆರೋಪಿಗಳಾಗಿದ್ದಾರೆ.

ಇನ್ನಿಬ್ಬರು ಆರೋಪಿಗಳಾದ ರಾಜು ಹಾಗೂ ಜಗ್ಗು ಎಂಬವರು ಸ್ಥಳದಿಂದ ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ. ಈ ಸಂಬಂಧ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

About The Author