Dharwad News: ಧಾರವಾಡ: ಮಳೆಗಾಲ ಶುರುವಾದಾಗಿನಿಂದ ರಾಜ್ಯದಲ್ಲಿ ಡೆಂಗ್ಯೂ ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಹಾಗಾಗಿ ಧಾರವಾಡದಲ್ಲಿ ಕುಷ್ಮ ಎಜುಕೇಶನ್ ಸಂಸ್ಥೆ ಈ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದೆ.
ಸಂಜೀವಿನಿ ಸ್ಪೆಷಾಲಿಟಿ ಹಾಸ್ಪಿಟಲ್ ಮತ್ತು ಹಾರ್ಟ್ ಕೇರ್ ಸೆಂಟರ್ ಇವರ ಸಹಭಾಗಿತ್ವದಲ್ಲಿ, ಸಂಸ್ಥೆಯ ಅಧ್ಯಕ್ಷರಾದ ಡಾ|| ಅಭಿಷೇಕ್ ಪಾಟೀಲ್ ರವರ ಅಡಿಯಲ್ಲಿ ಹುಬ್ಬಳ್ಳಿಯ ನಗರದಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ.
ಈ ಸಂಸ್ಥೆ ಕಳೆದ ಒಂದು ವಾರದಿಂದ ಡೆಂಗ್ಯೂ ಜನಜಾಗೃತಿ ಕಾರ್ಯಕ್ರಮ ನಡೆಸುತ್ತಿದ್ದು, ನಗರದ ನೇಕಾರ ಕಾಲೊನಿ, ಹೊಸೂರ, ಹಾಗೂ ರಾಮಲಿಂಗೇಶ್ವರ ನಗರದಲ್ಲಿ ಅರಿವು ಕಾರ್ಯಕ್ರಮ ನಡೆಸಲಾಗುತ್ತಿದೆ. ಡೆಂಗ್ಯೂ ಜ್ವರವನ್ನು ಯಾವ ರೀತಿ ನಿಯಂತ್ರಣ ಮಾಡಬೇಕು ಎಂಬ ಬಗ್ಗೆ ವಿದ್ಯಾರ್ಥಿಗಳು ಮನವರಿಕೆ ಮಾಡಿಕೊಡುತ್ತಿದ್ದಾರೆ. ಇವರ ಈ ಕಾರ್ಯಕ್ಕೆ ಕುಷ್ಮ ಸಂಸ್ಥೆ ಹಾಗೂ ಕಾಲೇಜ್ ಆಫ್ ನರ್ಸಿಂಗ್ ಮತ್ತು ಸಂಜೀವಿನಿ ಹಾರ್ಟ್ ಸ್ಪೇಶಾಲಟಿ ಆಸ್ಪತ್ರೆಗೆ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.