- Advertisement -
Hubli News: ಹುಬ್ಬಳ್ಳಿ: ಕುಂದಗೋಳ ತಾಲ್ಲೂಕು ಹಂಚಿನಾಳ ಗ್ರಾಮದ ಬಳಿಯ ಹಳ್ಳದಲ್ಲಿ ಟ್ರಾಕ್ಟರ್ ಪಲ್ಟಿಯಾಗಿ, ಕುಂದಗೋಳ ನಿವಾಸಿ ಶಿವಯ್ಯ ಬಸಯ್ಯ ವಟ್ನಾಲಮಠ (31) ಎಂಬುವರು ಸಾವನ್ನಪ್ಪಿದ್ದರು. ಮತ್ತು ಕುಂದಗೋಳ ನಿವಾಸಿ ವಾಸು ಶಿವಪ್ಪ ಬ್ಯಾಹಟ್ಟಿ (25) ಹಾಗೂ ಕಲಘಟಗಿ ತಾಲೂಕಿನ ಮುಕ್ಕಲ ಗ್ರಾಮದ ಮಲ್ಲಿಕಾರ್ಜುನ ಶಿವಪ್ಪ ಅಂಚಟಗೇರಿ (26) ಗಾಯಗ“ಂಡಿದ್ದರು.
ಇಂದು ಕುಂದಗೋಳ ತಾಲೂಕಿನ ಹಂಚಿನಾಳ ಗ್ರಾಮದ ಬಳಿಯ ಕಟ್ಟಿಹಳ್ಳಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ ನೀಡಿದ್ದರು. ಮೃತನ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ.
ಅಲ್ಲದೇ, ಗಾಯಾಳುಗಳಿಗೆ ಕುಂದಗೋಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಸಂತೋಷ್ ಲಾಡ್, ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಸಚಿವರಿಗೆ ಅಧಿಕಾರಿಗಳು ಸಾಥ್ ನೀಡಿದ್ದಾರೆ.
- Advertisement -