Tuesday, October 14, 2025

Latest Posts

ಲೇಡಿ ಸಿಂಗಂ ಪಿಸ್ತೂಲಿನಿಂದ ಸಿಡಿದಿದ್ದು ಬರೀ ಮದ್ದಲ್ಲ, ಜನರ ಆಕ್ರೋಶ: ಪಿಎಸ್‌ಐ ಅನ್ನಪೂರ್ಣ ಭದ್ರಕಾಳಿಯಾದಾಗ..!

- Advertisement -

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಅತ್ಯಾಚಾರ ಯತ್ನ ಮತ್ತು ಕೊಲೆ ಪ್ರಕರಣದ ಆರೋಪಿಯ ಎನ್‌ಕೌಂಟರ್‌, ಇದೀಗ ಇಡೀ ದೇಶಾದ್ಯಂತ ಚರ್ಚೆಯಾಗುತ್ತಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲೆತ್ನಿಸಿದ ಆರೋಪಿ ಬಿಹಾರ ಮೂಲದ ರಿತೇಶ್‌ ಕುಮಾರ್‌, ಹುಬ್ಬಳ್ಳಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ರಿತೇಶ್‌ ಕುಮಾರ್‌ ಎನ್‌ಕೌಂಟರ್‌ನಲ್ಲಿ ಪ್ರಮುಖ ಪಾತ್ರವಹಿಸಿದ ಹುಬ್ಬಳ್ಳಿಯ ಮಹಿಳಾ ಪೊಲೀಸ್‌ ಅಧಿಕಾರಿ ಅನ್ನಪೂರ್ಣ ಅವರಿಗೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

ಹೌದು, ಹುಬ್ಬಳ್ಳಿ ಬಾಲಕಿ ಅತ್ಯಾಚಾರ ಯತ್ನ ಮತ್ತು ಕೊಲೆ ಪ್ರಕರಣದ ಆರೋಪಿಯ ಎನ್‌ಕೌಂಟರ್‌ನಲ್ಲಿ ಪಿಎಸ್‌ಐ ಅನ್ನಪೂರ್ಣ ನಿರ್ವಹಿಸಿದ ಪಾತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಪಿಎಸ್‌ಐ ಅನ್ನಪೂರ್ಣ ಅವರ ಬಗ್ಗೆ ಇದೀಗ ರಾಜ್ಯದ ಮನೆ ಮನೆಗಳಲ್ಲಿ ಚರ್ಚೆಯಾಗುತ್ತಿದ್ದು, ಈ ದಿಟ್ಟ ಅಧಿಕಾರಿಣಿಯನ್ನು ಜನರು ತಮ್ಮ ಮನೆ ಮಗಳಂತೆ ನೋಡುತ್ತಿದ್ದಾರೆ.

ಆರೋಪಿ ರಿತೇಶ್‌ ಕುಮಾರ್‌ ಎನ್‌ಕೌಂಟರ್‌ ಘಟನೆಯಲ್ಲಿ ಪಿಎಸ್‌ಐ ಅನ್ನಪೂರ್ಣ ಅವರೂ ಕೂಡ ಗಾಯಗೊಂಡಿದ್ದು, ಅವರಿಗೆ ಹುಬ್ಬಳ್ಳಿಯ ಕೀಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪಿಎಸ್‌ಐ ಅನ್ನಪೂರ್ಣ ಅವರ ಚೇತರಿಕೆಗೆ ಇಡೀ ರಾಜ್ಯದ ಜನ ಪ್ರಾರ್ಥಿಸುತ್ತಿದ್ದಾರೆ. ಇದೇ ವೇಳೆ ಆಕೆಯ ದಿಟ್ಟತನವನ್ನು ಜನರು ಕೊಂಡಾಡುತ್ತಿದ್ದಾರೆ

ಪಿಎಸ್‌ಐ ಅನ್ನಪೂರ್ಣ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗಳಾಗುತ್ತಿದ್ದು, ನೆಟ್ಟಿಗರು ಈ ಅಧಿಕಾರಿಯನ್ನು “ಭದ್ರಕಾಳಿ” ಎಂದು ಕೊಂಡಾಡಿದ್ದಾರೆ. ಅನೇಕರು ಆಕೆಯ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದು, ಆರೋಪಿಗೆ ತಕ್ಕ ಶಿಕ್ಷೆ ನೀಡಿದ “ಪಿಎಸ್‌ಐ ಅನ್ನಪೂರ್ಣ ಅವರಿಗೆ ಧನ್ಯವಾದ” ಎಂದು ಹೇಳಿದ್ದಾರೆ.

- Advertisement -

Latest Posts

Don't Miss