Lal Bagh ಫಲಪುಷ್ಪ ಪ್ರದರ್ಶನ ರದ್ದು.

ಬೆಂಗಳೂರು ; ಬೆಂಗಳೂರು ನಗರದಲ್ಲಿ ನಡೆಯುವ ಪ್ರಮುಖ ಕಾರ್ಯಕ್ರಮಗಳಲ್ಲಿ ಫಲಪುಷ್ಪ ಪ್ರದರ್ಶನ ಸಹ ಸೇರಿದೆ. ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ತೋಟಗಾರಿಕಾ ಇಲಾಖೆ ಪ್ರದರ್ಶನ ಆಯೋಜನೆ ಮಾಡಲಿದ್ದು, ಲಕ್ಷಾಂತರ ಜನರು ಇದರಲ್ಲಿ ಭಾಗಿಯಾಗುತ್ತಾರೆ.

ಆದರೆ ಕಳೆದ ವರ್ಷವು ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿಯೇ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದುಗೊಂಡಿತ್ತು. ಈ ವರ್ಷ ತೋಟಗಾರಿಕಾ ಇಲಾಖೆ ಮತ್ತು ಮೈಸೂರು ತೋಟಗಾರಿಕಾ ಸೊಸೈಟಿ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡುವ ಸಿದ್ಧತೆಯಲ್ಲಿದ್ದವು.

ಆದರೆ ಬೆಂಗಳೂರು ನಗರದಲ್ಲಿ ಹೊಸ ಕೋವಿಡ್ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಯಾಗಿದೆ. ಆದರಿಂದ ಕರ್ನಾಟಕ ಸರ್ಕಾರ 50 ಜನಕ್ಕಿಂತ ಹೆಚ್ಚು ಜನರು ಸೇರುವ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇದರಿಂದ ಈ ವರ್ಷ ನಡೆಯಬೇಕಾಗಿದ್ದ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ ನಡೆಯುವುದು ಡ್ವಟ್. ಆದರೆ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಏನಾದರೂ ಅವಕಾಶ ನೀಡಿದರೆ. ನಾವು ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದ ಸೌದಂರ್ಯವನ್ನು ನೋಡಬಹುದು.

About The Author