ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ಬೈ ಹೇಳಿದ ಲಾಲ್‌ ಬಹಾದ್ದೂರ್ ಶಾಸ್ತ್ರಿ ಮೊಮ್ಮಗ ವಿಭಾಕರ್ ಶಾಸ್ತ್ರಿ

National Political News: ಕೆಲ ದಿನಗಳಿಂದ ಹಲವು ನಾಯಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಇದೀಗ ಲಾಲ್‌ ಬಹಾದ್ದೂರ್ ಶಾಸ್ತ್ರಿ ಮೊಮ್ಮಗ, ವಿಭಾಕರ್ ಶಾಸ್ತ್ರಿ ಕಾಂಗ್ರೆಸ್ ತೊರೆದಿದ್ದಾರೆ. ಬಳಿಕ ಉತ್ತರಪ್ರದೇಶದ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಶಾಸ್ತ್ರಿ, ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ, ನಾನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಮೊನ್ನೆಯಷ್ಟೇ ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ್ ಚೌಹಾಣ್, ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ, ನಿನ್ನೆ ಬಿಜೆಪಿಗೆ ಸೇರಿದ್ದಾರೆ.

ರೈತರ ಮೇಲಿನ ದಾಳಿ ಖಂಡನೀಯ. ರೈತರಿಗೆ ಕನಿಷ್ಠ ಬೆಂಬಲ ಬೆಲೆ, ಇದು ʼಇಂಡಿಯಾʼ ಗ್ಯಾರಂಟಿ: ಡಿಸಿಎಂ ಡಿಕೆಶಿ

ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚೌಹಾಣ್ ಬಿಜೆಪಿ ಸೇರ್ಪಡೆ

ಅಯೋಧ್ಯೆ ಶ್ರೀರಾಮನ ದರ್ಶನದ ವೇಳೆ ಭಾವುಕರಾದ ಮಾಜಿ ಸಚಿವ ಸಿ.ಟಿ.ರವಿ

About The Author