www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ಘೋಷಣೆಯಾದ ಬೆನ್ನೆಲ್ಲೇ ಇವರೆಗೂ 70 ನಾಮಪತ್ರಗಳು ಸಲ್ಲಿಕೆಯಾಗಿವೆ. ಅಲ್ಲದೆ ಇಂದು ನಾಮಪತ್ರ ಸಲ್ಲಿಕೆಗೆ ಅಭ್ಯರ್ಥಿಗಳು ತಮ್ಮ ಅರ್ಜಿ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಲಿಕೆ ಸುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಡಿಸಿಪಿ ಡಾ.ವಿಕ್ರಮ್ ಆಮಟೆ , ಮುಂಜಾಗೃತಾ ಕ್ರಮವಾಗಿ ವಿವಿಧೆಡೆ 12 ಆರ್ ಓ ಅಧಿಕಾರಿಗಳನ್ನು ನೇಮಿಸಲಾಗಿದೆ. ಟಿಳಕವಾಡಿ, ಖಡೇಬಜಾರ್, ಮಾರ್ಕೆಟ್, ಎಪಿಎಂಸಿ ಹಾಗೂ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲು ಜಿಲ್ಲಾ ಚುನಾವಣಾ ಅಧಿಕಾರಿ ಅವಕಾಶ ಕಲ್ಪಿಸಿದ್ದಾರೆ. ಚುನಾವಣೆ ಇರುವುದರಿಂದ ಜನರು ಕೋವಿಡ್ ನಿಯಮ ಪಾಲನೆ ಮಾಡಬೇಕು ಅಂತ ಇದೇ ವೇಳೆ ಮನವಿ ಮಾಡಿದ್ರು. ಅಷ್ಟೇ ಅಲ್ಲದೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಅಂತ ಡಿಸಿಪಿ ಆಮಟೆ ಎಚ್ಚರಿಕೆ ನೀಡಿದರು.
ನಾಗೇಶ್ ಕರ್ನಾಟಕ ಟಿವಿ ಬೆಳಗಾವಿ


