Wednesday, January 15, 2025

Latest Posts

ರೈತರು ವಿಮಾ ಪ್ರಸ್ತಾವನೆ ಸಲ್ಲಿಸಲು ಜುಲೈ15 ಕೊನೆಯ ದಿನ..!

- Advertisement -

ಮಂಡ್ಯ: ಜೂ.16 2020ರ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲು ಮಂಜೂರಾತಿ ನೀಡಲಾಗಿದೆ. ಇವುಗಳಲ್ಲಿ ತಾಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಮತ್ತು ಇತರೆ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಿ ಅನುಷ್ಠಾನಗೊಳಿಸಲು ಮಂಜೂರಾತಿ ಮಾಡಲಾಗಿದೆ.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭತ್ತ ನೀರಾವರಿ ಬೆಳೆಗೆ ಮಂಡ್ಯ, ಮದ್ದೂರು, ಮಳವಳ್ಳಿ, ಕೆ.ಆರ್.ಪೇಟೆ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕುಗಳ ಅಧಿಸೂಚಿತ ಗ್ರಾಮ ಪಂಚಾಯಿತಿಗಳಲ್ಲಿ ರಾಗಿ (ಮಳೆ ಆಶ್ರಿತ) ಬೆಳೆಗೆ ಹಾಗೂ  ನಾಗಮಂಗಲ ಮತ್ತು ಪಾಂಡವಪುರ ತಾಲೂಕುಗಳ ಅಧಿಸೂಚಿತ ಗ್ರಾಮ ಪಂಚಾಯಿತಿಗಳಲ್ಲಿ ಮುಸುಕಿನಜೋಳ (ಮಳೆ ಆಶ್ರಿತ) ಬೆಳೆಗೆ ಮಳವಳ್ಳಿ ತಾಲೂಕಿನ ಅಧಿಸೂಚಿತ ಗ್ರಾಮ ಪಂಚಾಯಿತಿಗಳಲ್ಲಿ  ರೈತರು ವಿಮೆಗೆ ನೊಂದಾಯಿಸಿಕೊಳ್ಳಬಹುದಾಗಿದೆ. 

ಹೋಬಳಿಮಟ್ಟದಲ್ಲಿ ಭತ್ತ (ನೀರಾವರಿ) ಭತ್ತ (ಮಳೆ ಆಶ್ರಿತ), ರಾಗಿ (ನೀರಾವರಿ), ರಾಗಿ (ಮಳೆ ಆಶ್ರಿತ), ಮುಸುಕಿನಜೋಳ (ನೀರಾವರಿ), ತೊಗರಿ (ಮಳೆ ಆಶ್ರಿತ), ಹುರುಳಿ (ಮಳೆ ಆಶ್ರಿತ), ಎಳ್ಳು (ಮಳೆ ಆಶ್ರಿತ), ನೆಲಗಡಲೆ (ಮಳೆ ಆಶ್ರಿತ), ಅಲಸಂದೆ (ಮಳೆ ಆಶ್ರಿತ), ಟೊಮ್ಯಾಟೋ ಮತ್ತು ಎಲೆಕೋಸು ಬೆಳೆಗಳಿಗೆ ಅಧಿಸೂಚಿತ ಹೋಬಳಿಗಳಲ್ಲಿ ರೈತರು ವಿಮೆಗೆ ನೊಂದಾಯಿಸಬಹುದು.

2020ರ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಅಧಿಸೂಚಿಸಲಾದ ಬೆಳೆಗಳು, ಇಂಡೆಮ್ನಿಟಿ ಮಟ್ಟ, ವಿಮಾ ಮೊತ್ತ ಮತ್ತು ವಿಮಾ ಪ್ರಸ್ತಾವನೆ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದೆ.

ಆಸಕ್ತ ರೈತರು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಬ್ಯಾಂಕುಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರವೀಣ್ ಕುಮಾರ್ ಜಿ.ಟಿ, ಕರ್ನಾಟಕ ಟಿವಿ, ಮಂಡ್ಯ

ಲೋನ್ ಅಪ್ಲೈ ಮಾಡೋದು ಹೇಗೆ..? ಪ್ರಧಾನ ಮಂತ್ರಿ ಆವಾಸ್ ಯೋಜನೆ ಲಾಭ ಪಡೆಯೋದು ಹೀಗೆ..? ಯಾವ ಬ್ಯಾಂಕ್ ಸೇಫ್ ಅಲ್ಲ..? ಎಲ್ಲಾ ರೀತಿಯ ಹಣಕಾಸಿನ ಮಾಹಿತಿಗಾಗಿ ಈ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.. ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ..

https://indianmoney.com/ffc

- Advertisement -

Latest Posts

Don't Miss