- Advertisement -
ಬೆಂಗಳೂರು- ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಇದೀಗ ಕಂಠೀರವ ಕ್ರೀಡಾಂಗಣದಲ್ಲಿಸಲಾಗಿದೆ. ಈ ಮೂಲಕ ಸಾರ್ವಜನಿಕರು ಮತ್ತು ಅಭಿಮಾನಿಗಳು ಅವರ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಕೈಗೊಳ್ಳಲಾಗಿದೆ. ಇನ್ನು ಭಾನುವಾರ ನಟ ಪುನೀತ್ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಯೇ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಹೀಗಾಗಿ ದಿವಂಗತ ನಟ ಡಾ.ರಾಜ್ ಕುಮಾರ್ , ಪಾರ್ವತಮ್ಮರ ಸಮಾಧಿ ಬಳಿಯೇ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಲಿದೆ. ಇನ್ನು ಭಾನುವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ರಾಜ್ ಕುಮಾರ್ ರವರ ಅಂತ್ಯ ಸಂಸ್ಕಾರ ನೆರವೇರಲಿದೆ ಅಂತ ಸರ್ಕಾರ ತಿಳಿಸಿದೆ.
- Advertisement -