Hyderabad News: ಸಚಿವ ಜಮೀರ್ ಅಹ್ಮದ್ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಹೈದರಾಬಾದ್ ನ ಪಾರ್ಕ್ ಹಟ್ ಹೋಟೆಲ್ ನಲ್ಲಿ ಉಳಿದುಕೊಂಡಿದ್ದರು.
ಚುನಾವಣಾ ಅಕ್ರಮ ಶಂಕೆ ಮೇಲೆ ದಾಳಿ ನಡೆಸಿರುವ ಪೊಲೀಸರು ಜಮೀರ್ ಅಹ್ಮದ್ ಅವರ ಕೊಠಡಿಯನ್ನು ಪರಿಶೀಲನೆ ನಡೆಸಿದ್ದಾರೆ. ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆ ದಾಳಿ ನಡೆದಿದೆ ಎನ್ನಲಾಗಿದೆ.
ಮಧ್ಯರಾತ್ರಿ ದಾಳಿ ನಡೆಸಿರುವ ಹೈದರಾಬಾದ್ ಪೊಲೀಸರು ಜಮೀರ್ ಅವರ ಬೆಂಬಲಿಗರ ಕೊಠಡಿಗಳನ್ನು ಪರಿಶೀಲನೆ ನಡೆಸಿ ತೆರಳಿರುವ ಮಾಹಿತಿ ಲಭ್ಯವಾಗಿದೆ. ದಾಳಿ ವೇಳೆ ಏನಾದ್ರೂ ಸಿಕ್ಕಿದೆಯಾ ಅಥವಾ ಇಲ್ಲವಾ ಎಂಬುವುದು ತಿಳಿದು ಬಂದಿಲ್ಲ.
ಪೊಲೀಸರು ದಾಳಿ ನಡೆಸಿರುವ ಮಾಹಿತಿಯನ್ನು ಜಮೀರ್ ಅಹ್ಮದ್ ತಮ್ಮ ಅಧಿಕೃ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಮಾಹಿತಿಯನ್ನು ನೀಡಿದ್ದಾರೆ.
ಬಿಜೆಪಿ ಮತ್ತು ಬಿಎಸ್ಆರ್ ಸೋಲುವ ಭಯದಿಂದ ನಾನು ಉಳಿದುಕೊಂಡಿದ್ದ ಹೋಟೆಲ್ ಮೇಲೆ ಪೊಲೀಸರಿಂದ ದಾಳಿ ಮಾಡಿಸಿದೆ ಎಂದು ಜಮೀರ್ ಅಹ್ಮದ್ ಖಾನ್ ಗಂಭೀರ ಆರೋಪವನ್ನು ಮಾಡಿದ್ದಾರೆ.
ಪೊಲೀಸ್ ಕಿರುಕುಳಕ್ಕೆ ಯುವಕ ಆತ್ಮಹತ್ಯೆ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು!