Political News: ಬೀದರ್‌ನಲ್ಲಿ ಹಿಂದೂ ಧರ್ಮದ ಆಟೋ ಚಾಲಕ, ಮುಸ್ಲಿಂ ಮಹಿಳೆಯನ್ನು ಆಟೋದಲ್ಲಿ ಡ್ರಾಪ್ ಮಾಡಿದ್ದಕ್ಕಾಗಿ, ಹಿಗ್ಗಾಮುಗ್ಗಾ ಥಳಿಸಿದ್ದು, ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಈ ಬಗ್ಗೆ ಆಕ್ರೋಶ ಹೊರಹಾಕಿರುವ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ, ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಅಧೋಗತಿಗೆ ಇಳಿದಿದೆ. ಪೋಲೀಸರು ಕೂಡ ಅಸಹಾಯಕರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಹಿಂದೂಗಳು ಒಂಟಿಯಾಗಿ ಓಡಾಡುವುದಿರಲಿ, ಜೀವನೋಪಾಯಕ್ಕಾಗಿ ಆಟೋ ಚಾಲನೆಯನ್ನು ಮಾಡಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಿಸಿದೆ. ಬೀದರ್‌ನ ಬಸವಕಲ್ಯಾಣದಲ್ಲಿ ಆಟೋದಲ್ಲಿ ಮುಸ್ಲಿಂ ಮಹಿಳೆಯನ್ನು ಡ್ರಾಪ್ ಮಾಡಿದ ಚಾಲಕನ ಮೇಲೆಯೇ ಮತಾಂಧರರು ಹಿಗ್ಗಾಮುಗ್ಗಾ ಥಳಿಸಿದ್ದು, ಇವರಿಗೆ ಕಾನೂನು, ಪೋಲಿಸರ ಭಯ ಕೂಡ ಇಲ್ಲದಂತಿದೆ. ಕಾಂಗ್ರೆಸ್ ಶಾಂತಿಯ ತೋಟ ನಿರ್ಮಾಣ ಮಾಡುತ್ತೇವೆ ಎಂದು, ಎರಡು ಸಮುದಾಯಗಳ ಮಧ್ಯೆ ದೊಡ್ಡ ಕಂದಕ ನಿರ್ಮಿಸುತ್ತಿದೆ ಎಂದು ಪ್ರೀತಂಗೌಡ ವಾಗ್ದಾಳಿ ನಡೆಸಿದ್ದಾರೆ.
ಭಾರತಕ್ಕೆ ಭೇಟಿ ನೀಡಿ ಕ್ಷಮೆ ಕೇಳಲಿದ್ದಾರೆ ಮಾಲ್ಡೀವ್ಸ್ ವಿದೇಶಾಂಗ ಸಚಿವರು