Sunday, September 8, 2024

Latest Posts

Laxman savadi: ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು

- Advertisement -

ಜಿಲ್ಲಾ ಸುದ್ದಿಗಳು :ಪ್ರಾಸ್ತಾವಿಕವಾಗಿ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು, ಭಾಗ್ಯದ ಬಾಗಿಲುಗಳನ್ನು ತೆರದ ಬಳಿಕ ಮೊದಲ ಬಾರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು ಎಂದು ಹೇಳಿದರು

70 ಸಾವಿರ ಎಕರೆ ಜಮೀನು ಇನ್ನೂ ನೀರಾವರಯಿಂದ ವಂಚಿತಗೊಂಡಿದ್ದು, ಇದಕ್ಕೆ ಅವಕಾಶ ಕಲ್ಪಿಸಬೇಕು. ಅದೇ ರೀತಿ ಒಂಬತ್ತು ಹಳ್ಳಿಗಳು ಮತ್ತು ಜಮೀನು ಸವಳು-ಜವಳು ಸಮಸ್ಯೆಯಿಂದ ಬಾಧಿತಗೊಂಡಿರುತ್ತವೆ ಇದಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಮನವಿ ಮಾಡಿಕೊಂಡರು.

ಕೃಷಿ ಮಹಾವಿದ್ಯಾಲಯ ಸ್ಥಾಪನೆಗೆ ತಕ್ಷಣಕ್ಕೆ 20 ಕೋಟಿ ಒದಗಿಸಬೇಕು. ಅಥಣಿ ಭಾಗದ ಒಣ ದ್ರಾಕ್ಷಿಯನ್ನು ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೌಷ್ಟಿಕಾಹಾರ ತಯಾರಿಕೆಗೆ ಖರೀದಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಶಾಸಕ ಲಕ್ಷ್ಮಣ ಸವದಿ ವಿನಂತಿಸಿದರು.

ಕಾಗವಾಡ ಶಾಸಕ ಭರಮಗೌಡ ಕಾಗೆ ಮಾತನಾಡಿ, ನೂತನ ಕಾಗವಾಡ ತಾಲ್ಲೂಕಿಗೆ ಸರಕಾರಿ ಕಚೇರಿಗಳು ಸೇರಿದಂತೆ ಎಲ್ಲ ಮೂಲಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿದರು. ಕಾಗವಾಡ ತಾಲ್ಲೂಕಿನ ಎರಡು ಹೋಬಳಿಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.
ಏತ‌ ನೀರಾವರಿ ಯೋಜನೆ ಅನುಷ್ಠಾನಗೊಳಿಸಬೇಕು; 2015 ವರೆಗಿನ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು. ಸೌಲಭ್ಯಗಳಿಂದ ವಂಚಿತಗೊಂಡಿರುವ ಗಡಿಭಾಗದ ಅಥಣಿ ಹಾಗೂ ಕಾಗವಾಡ ಕ್ಷೇತ್ರಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕು ಎಂದು ಭರಮಗೌಡ ಕಾಗೆ ಅವರು ಕ್ಷೇತ್ರದ ಜನರ ಪರವಾಗಿ ವಿನಂತಿಸಿದರು.

Siddaramaiah: ಕಾಂಗ್ರೆಸ್ ಪಕ್ಷದ ಗೆಲುವು ಬಿಜೆಪಿಯ ಭಯಕ್ಕೆ ಕಾರಣ

ಹುಬ್ಬಳ್ಳಿಯ 14 ಗ್ರಾಮಗಳಿಗೆ ಕೆರೆ ಬತ್ತಿಹೋಗುವ ಆತಂಕ..

ಈ ಸಮಯದಲ್ಲಿ ಎಂದಿಗೂ ಕಸ ಗುಡಿಸಬಾರದು.. ಇದರಿಂದ ದರಿದ್ರ ಸಂಭವಿಸುವ ಸಾಧ್ಯತೆ ಹೆಚ್ಚು..

 

- Advertisement -

Latest Posts

Don't Miss