ಉಡುಪಿ: ನನಗೆ ವೈದ್ಯಳಾಗಬೇಕು ಎಂಬ ಕನಸಿತ್ತು. ನನ್ನ ಮಗ ಇಂಜಿನಿಯರ್ ಆದ. ಸೊಸೆ ಡಾಕ್ಟರ್ ಆಗಿದ್ದಾಳೆ. ಸೊಸೆ ಮೂಲಕ ಕುಟುಂಬದಲ್ಲಿ ವೈದ್ಯರ ಕೊರತೆ ನೀಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಉಡುಪಿ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ ಉಡುಪಿ ಜಿಲ್ಲಾ ಸರಕಾರಿ ಪದವಿಪೂರ್ವ ಕಾಲೇಜುಗಳ ವಿಜ್ಞಾನ ವಿದ್ಯಾರ್ಥಿಗಳಿಗಾಗಿ CET/NEET/JEE ಆನ್ ಲೈನ್ ತರಬೇತಿಗೆ ಚಾಲನೆ ನೀಡಿದ ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರೇರಣಾ ನುಡಿಗಳನ್ನಾಡಿದ ಸಚಿವರು, ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ಅಕ್ಕಮಹಾದೇವಿಯಂಥ ದೊಡ್ಡ ದೊಡ್ಡ ವ್ಯಕ್ತಿಗಳು ರಾತ್ರೋರಾತ್ರಿ ದೊಡ್ಡವರಾಗಿಲ್ಲ. ಅವರ ಪರಿಶ್ರಮದಿಂದಲೇ ಸಮಾಜದಲ್ಲಿ ದೊಡ್ಡ ವ್ಯಕ್ತಿಗಳಾದರು ಎಂದರು. ಇಂದಿನ ವಿದ್ಯಾರ್ಥಿಗಳಿಗೆ ಓದುವುದಕ್ಕೆ ಆನ್ ಲೈನ್ ವ್ಯವಸ್ಥೆ ಇತ್ತು. ಬಾಬಾ ಸಾಹೇಬ್ ಅಂಡಬೇಡ್ಕರ್ ಅವರಿಗೆ ಓದುವುದಕ್ಕೂ ಸೂಕ್ತ ಸ್ಥಳವಿರಲಿಲ್ಲ.
ಬೀದಿ ದೀಪದ ಕೆಳಗೆ ಕುಳಿತು ಓದಿ, ದೊಡ್ಡ ವ್ಯಕ್ತಿಯಾದರು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸೂಕ್ತವಾಗಿ ಬಳಸಿಕೊಂಡು ಮುಂದೆ. ಎಲ್ಲಾ ಮಹಾತ್ಮರ ಬದುಕು ನಿಮಗೆಲ್ಲಾ ಆದರ್ಶವಾಗಬೇಕು ಎಂದು ಕರೆ ನೀಡಿದರು. ಭಾರತಕ್ಕೆ 5 ಸಾವಿರ ವರ್ಷಗಳ ಇತಿಹಾಸವಿದೆ. ನಮ್ಮ ಹಿಂದಿನ ಮಹಾರಾಜರು ತಮ್ಮ ಮಕ್ಕಳಿಗೆ ಕಷ್ಟ ಅರ್ಥಮಾಡಿಸುವ ದೃಷ್ಟಿಯಿಂದ ಗುರುಕುಲಗಳಲ್ಲಿ ವಿದ್ಯಾಭ್ಯಾಸ ಕೊಡಿಸುತ್ತಿದ್ದರು. ಇದರಿಂದ ಕಷ್ಟದ ಜೀವನ ಅರ್ಥ ಮಾಡಿಸುತ್ತಿದ್ದರು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ನಾವು ಎಂದಿಗೂ ನಮ್ಮ ಪಾಲಕರಿಗೆ ಋಣಿಯಾಗಿರಬೇಕು, ಅವರು ಎಷ್ಟೇ ಕಷ್ಟಪಟ್ಟರೂ ಮಕ್ಕಳಿಗೆ ಉತ್ತಮ ಸೌಲಭ್ಯ ಕಲ್ಪಿಸುತ್ತಾರೆ. ಮಕ್ಕಳಿಗಾಗಿಯೇ ತಮ್ಮ ಜೀವನವನ್ನು ಮುಡುಪಾಗಿಡುತ್ತಾರೆ. ನನ್ನ ಮಗ,ಮಗಳು ಸಮಾಜದ ಆಸ್ತಿಯಾಗಬೇಕು ಎಂದು ಪೋಷಕರು ಕನಸು ಕಾಣುತ್ತಾರೆ ಎಂದರು. ಉಡುಪಿ ಜಿಲ್ಲಾ ಪಂಚಾಯತಿ ಆರಂಭಿಸಿರುವ ಆನ್ ಲೈನ್ ಸೇವೆಯನ್ನು ಸೂಕ್ತವಾಗಿ ಬಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಸಿಇಒ ಎಚ್.ಪ್ರಸನ್ನ, ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಉಪ ವಿಭಾಗಧಿಕಾರಿ ರಶ್ಮಿ ಉಪಸ್ಥಿತರಿದ್ದರು.
ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ – ಸಿಎಂ ಸಿದ್ದರಾಮಯ್ಯ
ಡಿಕೆಶಿಯವರ ಟ್ರ್ಯಾಕ್ ರೆಕಾರ್ಡ್ ಅವರ ವ್ಯಕ್ತಿತ್ವ ತೋರಿಸುತ್ತದೆ: ಅಶ್ವತ್ಥ್ ನಾರಾಯಣ್.