www.karnatakatv.net : ಬೆಳಗಾವಿ: ಯಡಿಯೂರಪ್ಪ ಸರಕಾರದಲ್ಲಿ ಮರಾಠ ಸಮುದಾಯಕ್ಕೆ ಸಚಿವ ಸ್ಥಾನ ನೀಡಿದ್ದರು ಆದರೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರದಲ್ಲಿ ಮರಾಠಾ ಸಮಾಜಕ್ಕೆ ಸಚಿವ ಸ್ಥಾನ ನೀಡದೆ, ಕಡೆಗಣನೆ ಮಾಡಿದ್ದಾರೆ.
ಮಂಗಳವಾರ ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮರಾಠಾ ಸಮುದಾಯದಿಂದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಾಹುಸಾಹೇಬ ಜಾಧವ ಈ ಹಿಂದೆ ಸಚಿವರಾಗಿದ್ದ ಶ್ರೀಮಂತ ಪಾಟೀಲ್ ಅವರಿಗೆ ಮತ್ತೇ ಸಚಿವ ಸ್ಥಾನ ನೀಡಬೇಕು ಇಲ್ಲದಿದ್ದರೆ ಸರ್ಕಾರದ ವಿರುದ್ಧ ಉಗ್ರವಾದ ಹೋರಾಟ ಮಾಡುತ್ತೇವೆ ಎಂದರು.
ಸಿಎಂ ಬೊಮ್ಮಾಯಿ ಅವರು ಸರ್ಕಾರದಲ್ಲಿ ಮರಾಠಾ ಸಮಾಜಕ್ಕೆ ಸಂಪೂರ್ಣ ಕಡೆಗಣನೆ ಮಾಡಲಾಗಿದೆ. ಮರಾಠಾ ಸಮಾಜವನ್ನು ಕಡೆಗಣನೆ ಮಾಡಿದರಿಂದ ನಮ್ಮ ಸಮಸ್ಯೆ ಯಾರ ಬಳಿ ಹೇಳಿಕೊಳ್ಳುವುದು ಎಂಬವುದು ನಮಗೆ ತಿಳಿಯದಾಗಿದೆ. 75 ರಿಂದ 85 ಲಕ್ಷದ ವರೆಗೆ ಮರಾಠ ಸಮಾಜದ ಜನಸಂಖ್ಯೆ ಇದ್ದರು ನಮ್ಮ ಸಮಾಜಕ್ಕೆ ಬಿಜೆಪಿ ಸರ್ಕಾರ ಕಡೆಗಣನೆ ಮಾಡಿದೆ ಎಂದು ಆರೋಪಿಸಿದರು.
ನಮ್ಮ ಸಮಾಜದ ಒಂದೇ ಒಂದು ಶಾಸಕರಿಗೆ ಸಚಿವ ಸ್ಥಾನ ನೀಡದೆ ಇರೋದರಿಂದ ಮುಂದಿನ ದಿನಗಳಲ್ಲಿ ಹೊರಾಟ ಮಾಡುತ್ತೇವೆ. ನಮ್ಮ ಸಮಾಜಕ್ಕೆ ಮಾನ್ಯತೆ ನೀಡುವವರೆಗೆ ಹೋರಾಟ ಮಾಡುತ್ತೇವೆ. ಈ ಹಿಂದೆ ಶ್ರೀಮಂತ ಪಾಟೀಲ್ ಅವರು ಸಚಿವರಿದ್ದರು, ಅವರಿಗೆ ಮರಳಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ನಾಗೇಶ್ ಕರ್ನಾಟಕ ಟಿವಿ ಬೆಳಗಾವಿ



