ನಾಯಕತ್ವ ಬದಲಾವಣೆ ಐದಾರು ಜನರ ನಡುವಿನ ಗುಟ್ಟಿನ ವಿಚಾರ – ಡಿಕೆಶಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿ ನಡೆದಿದೆ. ಇಂದು ರಾಹುಲ್ ಗಾಂಧಿ ಮತ್ತು ಖರ್ಗೆ ನಡುವಿನ ಭೇಟಿ ವಿಚಾರವಾಗಿ ಡಿಕೆಶಿ ಕನಕಪುರದಲ್ಲಿ ಮಾದ್ಯಮಗಳೊಂದಿದೆ ಮಾತನಾಡಿದ್ದಾರೆ. ನಾಯಕತ್ವ ಬದಲಾವಣೆ ನಮ್ಮ ಐದಾರು ಜನರ ನಡುವಿನ ಗುಟ್ಟಿನ ವಿಚಾರ. ಇದನ್ನು ನಾನು ಬಹಿರಂಗ ಮಾಡುವುದಿಲ್ಲ ಎಂದಿದ್ದಾರೆ.

ಅವರು ಚರ್ಚೆ ಮಾಡುವ ವಿಚಾರ ನನಗೆ ಗೊತ್ತಿಲ್ಲ. ಅವರು ನನಗೆ ಈ ಬಗ್ಗೆ ಹೇಳಿಲ್ಲ. ನಾನು ಆತ್ಮಸಾಕ್ಷಿಯನ್ನು ನಂಬಿದ್ದೇನೆ. ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು. ಪಕ್ಷಕ್ಕೆ ಮುಜುಗರ ತರೋಕೆ, ಪಕ್ಷವನ್ನು ದುರ್ಬಲಗೊಳಿಸೋಕೆ ನನಗೆ ಇಷ್ಟವಿಲ್ಲ. ನಾವು ಪಕ್ಷದ ಕಾರ್ಯಕರ್ತರು ಆದ್ರೆ ಸಿಎಂ ಸಿದ್ದರಾಮಯ್ಯ ಹಿರಿಯ ನಾಯಕರು, ನಮ್ಮ ಪಕ್ಷದ ಆಸ್ತಿ. ಸಿಎಂ ಆಗಿ ಏಳೂವರೆ ವರ್ಷಗಳ ಕಾಲ ಅಧಿಕಾರ ನಡೆಸಿದ್ದಾರೆ.

ನಾವೆಲ್ಲರೂ ಸೇರಿ 2028 ಹಾಗೂ 2029ರ ಚುನಾವಣೆ ಗುರಿಯತ್ತ ಗಮನ ಹರಿಸಬೇಕು ಎಂದಿದ್ದಾರೆ. ಇನ್ನೂ ಡಿಕೆಶಿ ಸಿಎಂ ಆಗಬೇಕು ಎಂದು ಅಭಿಮಾನಿಗಳು ಪೂಜೆ ಬಗ್ಗೆ ಪ್ರತಿಕ್ರಿಯಿಸಿ, ನನಗೆ ಅಧಿಕಾರ ಸಿಗಲಿ ಎಂದು ಈಗ ಪೂಜೆ ಮಾಡುತ್ತಿರುವುದಕ್ಕಿಂತ, ನಾನು ಜೈಲಿಗೆ ಹೋದಾಗ ನನ್ನ ತಾಯಂದಿರು, ಯುವಕರು, ಹಿರಿಯರು ದೇವಾಲಯದ ಅರ್ಚಕರು ಮಾಡಿದ ಪ್ರಾರ್ಥನೆಯನ್ನು ಮರೆಯಲು ಸಾಧ್ಯವಿಲ್ಲ.

ಅನೇಕರು ನಾನು ಬಿಡುಗಡೆಯಾಗುವವರೆಗೂ ಕಾಲಿಗೆ ಚಪ್ಪಲಿ ಹಾಕಿರಲಿಲ್ಲ. ನಾನು ಇಂದು ಡಿಸಿಎಂ ಆಗಿದ್ದು, ಪಕ್ಷದ ಅಧ್ಯಕ್ಷನಾಗಿದ್ದೇನೆ. ಕಷ್ಟ ಕಾಲದಲ್ಲಿದ್ದಾಗ ಮಾಡಿದ ಪ್ರಾರ್ಥನೆ, ಆಗ ಅವರು ನನಗೆ ಆತ್ಮಸ್ಥೈರ್ಯ ತುಂಬಿದ್ದು ನನಗೆ ಬಹಳ ವಿಶೇಷ ಎಂದು ನುಡಿದರು.

ಎಲ್ಲಾ ಕಡೆಗಳಲ್ಲಿ ನನ್ನ ಮುಖ ನೋಡಿ ಮತ ಹಾಕಿ ಎಂದು ಕೇಳಿದ್ದೇನೆ. ಜನ ನಮ್ಮ ಸಾಮೂಹಿಕ ನಾಯಕತ್ವಕ್ಕೆ ಮತ ಹಾಕಿದ್ದಾರೆ. ನನ್ನೊಬ್ಬನಿಗಾಗಿ ಮತ ಹಾಕಿದ್ದಾರೆ ಎಂದು ನಾನು ಹೇಳುವುದಿಲ್ಲ. 224 ಕ್ಷೇತ್ರಗಳಲ್ಲಿ ನಮಗಿಂತ ನಮ್ಮ ಕಾರ್ಯಕರ್ತರು ಹೆಚ್ಚು ಶ್ರಮ ಹಾಕಿದ್ದಾರೆ ಎಂದರು.

ವರದಿ : ಲಾವಣ್ಯ ಅನಿಗೋಳ

 

About The Author