- Advertisement -
National News:
ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಅನಿಲ್ ಚೌಹಾಣ್ ಅವರು ಇಂದು (ಶುಕ್ರವಾರ) ಅಧಿಕಾರ ಸ್ವೀಕರಿಸಿದರು ಎನ್ನಲಾಗಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯುನ್ನತ ಹುದ್ದೆಯ ಜವಾಬ್ದಾರಿ ನನಗೆ ದೊರಕಿರುವುದಕ್ಕೆ ಹೆಮ್ಮೆಯಾಗುತ್ತಿದೆ. ರಕ್ಷಣಾ ಪಡೆಗಳ ನಿರೀಕ್ಷೆಗಳನ್ನು ಈಡೇರಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸವಾಲುಗಳನ್ನು ನಿಭಾಯಿಸುವ ಮೂಲಕ ದೇಶಕ್ಕೆ ಹೆಮ್ಮೆ ತರುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ವಾಯುಪಡೆ ಮುಖ್ಯಸ್ಥ ಏರ್‌ಚೀಫ್ ಮರ‍್ಷಲ್ ವಿ.ಆರ್. ಚೌಧರಿ, ನೌಕಾಪಡೆಯ ಉಪ ಅಡ್ಮಿರಲ್ ಎಸ್.ಎನ್. ಘರ‍್ಮಾಡೆ, ಏರ್ ಮರ‍್ಷಲ್ ಬಿ.ಆರ್. ಕೃಷ್ಣ ಉಪಸ್ಥಿತರಿದ್ದರು.
ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ನೇಮಕ
- Advertisement -

