Thursday, December 26, 2024

Latest Posts

D. K. Shivakumar : ಡಿಕೆಶಿ ಬೆನ್ನು ಹತ್ತಿದ ಶಾಸಕ ಯತ್ನಾಳ್ – ಡಿಸಿಎಂ ವಿರುದ್ಧ ಸುಪ್ರೀಂ​ನಲ್ಲಿ ಕಾನೂನು ಸಮರ

- Advertisement -

ಒಂದೆ ಕಡೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿಕೊಟ್ಟಿದ್ದು, ಹೈಕೋರ್ಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಇನ್ನೊಂದೆಡೆ ಡಿಸಿಎಂ ಡಿಕೆಶಿ ವಿರುದ್ಧ ಯತ್ನಾಳ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ, ಏನಿದು ಪ್ರಕರಣ?

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಬೆನ್ನು ಹತ್ತಿದ ಯತ್ನಾಳ್ ಮತ್ತೊಂದು ಹಂತದ ಕಾನೂನು ಸಮರಕ್ಕೆ ಮುನ್ನುಡಿ ಬರೆದಿದ್ದಾರೆ. 2013ರಿಂದ 2018ರ ಅವಧಿಯಲ್ಲಿನ ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಪ್ರಕರಣಕ್ಕೆ ಸಂಬಂಧ ಡಿಕೆಶಿ ವಿರುದ್ಧ ಯತ್ನಾಳ್ ಸುಪ್ರೀ ಕೋರ್ಟ್ ಮೆಟ್ಟಿಲೇರಿದ್ದಾರೆ.

ಹೈಕೋರ್ಟ್‌ ಆದೇಶದ ಅನ್ವಯ ಯತ್ನಾಳ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್ ತೀರ್ಮಾನಿಸಲಿ. ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿದರೆ ಸೂಕ್ತ ಎಂದು ಹೈಕೋರ್ಟ್‌ ಪೀಠ ಅಭಿಪ್ರಾಯ ವ್ಯಕ್ತಪಡಿಸಿತ್ತು. ಹೀಗಾಗಿ ಸಿಬಿಐ ಮತ್ತು ಯತ್ನಾಳ್ ಅವರ ಅರ್ಜಿಗಳನ್ನು ಹೈಕೋರ್ಟ್ ವಜಾ ಮಾಡಿತ್ತು. ಹೈಕೋರ್ಟ್‌ ವಜಾಗೊಳಿಸಿದ ಕೆಲವೇ ದಿನಗಳಲ್ಲಿ ಸುಪ್ರೀಂ ಕೋರ್ಟ್​ಗೆ ಯತ್ನಾಳ್ ಅವರು ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ.

ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ತೆರೆಯಲು ಹೈಕೋರ್ಟ್‌ ಅವಕಾಶ ನೀಡಿರುವುದನ್ನು ಪ್ರಶ್ನಿಸಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

- Advertisement -

Latest Posts

Don't Miss